ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಕರ್ನಾಟಕವು ಅತಿ ಉದ್ದದ ಮಾನವ ಸರಪಳಿ ನಿರ್ಮಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಇದರಲ್ಲಿ ಭಾಗವಹಿಸಿದವರು ಏಕಕಾಲದಲ್ಲಿ ದಾಖಲೆ ನಿರ್ಮಿಸುವ ರೀತಿಯಲ್ಲಿ ಪರಸ್ಪರ ಕೈಹಿಡಿದು ಮಾನವ ಸರಪಳಿಯನ್ನು ನಿರ್ಮಾಣ ಮಾಡಿದ್ದಾರೆ.
ಈ ಮಾನವ ಸರಪಳಿ ಲಂಡನ್ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನ್ನು ಪ್ರವೇಶಿಸಿದೆ. ರಾಜ್ಯದ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯದಾದ್ಯಂತ ಮಕ್ಕಳು, ಹಿರಿಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡು ಈ ದಾಖಲೆ ನಿರ್ಮಿಸಿದ್ದಾರೆ.
ಸಮಾನತೆ, ಏಕತೆ, ಭ್ರಾತೃತ್ವ ಮತ್ತು ಸಹಭಾಗಿತ್ವದ ಆಡಳಿತವನ್ನು ಸಂಕೇತಿಸುವ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಆಚರಿಸಲು ದಾಖಲೆಯ 25 ಲಕ್ಷ ಜನರ ಭಾಗವಹಿಸುವಿಕೆ ಮೂಲಕ 2,500-ಕಿಮೀ ಉದ್ದದ ಸರಪಳಿಯನ್ನು ನಿರ್ಮಾಣ ಮಾಡಲಾಗಿತ್ತು. ಉತ್ತರದ ಬೀದರ್ನಿಂದ ದಕ್ಷಿಣದ ಚಾಮರಾಜನಗರದವರೆಗೆ ಮಾನವ ಸರಪಳಿ ಕರ್ನಾಟಕದ ಎಲ್ಲಾ 31 ಜಿಲ್ಲೆಗಳನ್ನು ಆವರಿಸಿ ಹಿಂದಿನ ದಾಖಲೆಯನ್ನು ಹಿಂದಿಕ್ಕಿತ್ತು.
ಮಾನವ ಸರಪಳಿಯು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಏಕತೆ ಮತ್ತು ಸಾಮೂಹಿಕ ಜವಾಬ್ದಾರಿಯನ್ನು ಸಂಕೇತಿಸುತ್ತದೆ. ಎಲ್ಲಾ ಜಿಲ್ಲೆಗಳಾದ್ಯಂತ 20 ಲಕ್ಷಕ್ಕೂ ಹೆಚ್ಚು ಜನರ ಸ್ವಯಂಪ್ರೇರಿತ ಭಾಗವಹಿಸುವಿಕೆ ಕರ್ನಾಟಕದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವದ ಮನೋಭಾವವನ್ನು ಪ್ರದರ್ಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.