ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಜಾಮೀನು ಪಡೆದು ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ದಿನಗಳಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಅತಿಶಿ ದೆಹಲಿಯ ಮುಖ್ಯಮಂತ್ರಿಯಾದ ಅತ್ಯಂತ ಕಿರಿಯ ನಾಯಕಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅವರು ಪ್ರಮಾಣವಚನ ಸ್ವೀಕರಿಸುವ ಮೊದಲು, ಅವರು ಮತ್ತು ಅವರ ಸಂಪುಟದ ಭಾಗವಾಗಿರುವ ಎಎಪಿ ನಾಯಕರು ಕೇಜ್ರಿವಾಲ್ ಅವರನ್ನು ಭೇಟಿಯಾದರು.
ಸುಲ್ತಾನ್ಪುರ ಮಜ್ರಾದಿಂದ ಮೊದಲ ಬಾರಿಗೆ ಶಾಸಕರಾಗಿರುವ ಮುಖೇಶ್ ಅಹ್ಲಾವತ್ ಅವರು ಅತಿಶಿ ಅವರ ಸಂಪುಟದಲ್ಲಿ ಸ್ಥಾನ ಪಡೆದುಕೊಂಡು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದದಾರೆ. ಗೋಪಾಲ್ ರೈ, ಇಮ್ರಾನ್ ಹುಸೇನ್, ಕೈಲಾಶ್ ಗಹ್ಲೋಟ್ ಮತ್ತು ಸೌರಭ್ ಭಾರದ್ವಾಜ್ ಕೂಡ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೇಜ್ರಿವಾಲ್ ಅವರ ರಾಜೀನಾಮೆಯಿಂದಾಗಿ ಎಎಪಿಯಲ್ಲಿ ಲವಲವಿಕೆಯಿಲ್ಲದ ಕಾರಣ ಪ್ರಮಾಣವಚನ ಸಮಾರಂಭವು ತೀರಾ ಸರಳ ಸ್ವರೂಪದಲ್ಲಿ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.