ಹೈದರಾಬಾದ್: ದೇವಸ್ಥಾನದ ಲಡ್ಡುಗಳಿಗೆ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.
ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, “ಇನ್ಸ್ಪೆಕ್ಟರ್ ಜನರಲ್ ಅಥವಾ ಅದಕ್ಕಿಂತ ಉನ್ನತ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚಿಸಲಾಗುವುದು. ಇದು ಎಲ್ಲಾ ಕಾರಣಗಳು, ಅಧಿಕಾರ ದುರುಪಯೋಗದ ಬಗ್ಗೆ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯನ್ನು ನೀಡುತ್ತದೆ. ದೇಗುಲಗಳಲ್ಲಿ ತಪ್ಪು ಕೃತ್ಯಗಳು ಮರುಕಳಿಸುವುದನ್ನು ತಪ್ಪಿಸಲು ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧವಾಗಿದೆ, ಇದರಲ್ಲಿ ಯಾವುದೇ ರಾಜಿ ಇಲ್ಲ” ಎಂದಿದ್ದಾರೆ.
ಈ ಹಿಂದೆ, ಆಡಳಿತಾರೂಢ ತೆಲುಗು ದೇಶಂ ಪಕ್ಷವು ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಟ್ರಸ್ಟ್ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.
ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಆಡಳಿತದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯಮಂತ್ರಿ ಅವರು ವ್ಯವಸ್ಥೆಯನ್ನು “ಸ್ವಚ್ಛಗೊಳಿಸು” ಎಂದು ಹೇಳಿದ್ದರು. ಕಳೆದ ಐದು ವರ್ಷಗಳಲ್ಲಿ ತಿರುಮಲದಲ್ಲಿ ಅನೇಕ ಪವಿತ್ರವಲ್ಲದ ಕೆಲಸಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.