ನವದೆಹಲಿ: ನರೇಂದ್ರ ಮೋದಿ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯಾದ ʼಮೇಕ್ ಇನ್ ಇಂಡಿಯಾʼ ಯಶಸ್ವಿ 10 ವರ್ಷಗಳನ್ನು ಪೂರ್ಣಗೊಳಿಸಿದೆ. ಈ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಉಪಕ್ರಮವನ್ನು ಶ್ಲಾಘಿಸಿದ್ದಾರೆ.
ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿರುವ ಅವರು ‘ಮೇಕ್ ಇನ್ ಇಂಡಿಯಾ’ ರಾಷ್ಟ್ರವನ್ನು ಉತ್ಪಾದನೆ ಮತ್ತು ನಾವೀನ್ಯತೆಯ ಶಕ್ತಿಯಾಗಿ ಪರಿವರ್ತಿಸುವ 140 ಕೋಟಿ ಭಾರತೀಯರ ಸಾಮೂಹಿಕ ಸಂಕಲ್ಪವನ್ನು ವಿವರಿಸುತ್ತದೆ ಎಂದು ಒತ್ತಿ ಹೇಳಿದರು.
ಸಾಧ್ಯವಿರುವ ಎಲ್ಲ ಮಾರ್ಗಗಳ ಮೂಲಕ ‘ಮೇಕ್ ಇನ್ ಇಂಡಿಯಾ’ವನ್ನು ಪ್ರೋತ್ಸಾಹಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ವಿವಿಧ ಕ್ಷೇತ್ರಗಳಲ್ಲಿ ರಫ್ತು ಹೇಗೆ ಏರಿಕೆಯಾಗಿದೆ, ಸಾಮರ್ಥ್ಯಗಳನ್ನು ನಿರ್ಮಿಸಲಾಗಿದೆ ಮತ್ತು ಆ ಮೂಲಕ ಆರ್ಥಿಕತೆಯನ್ನು ಬಲಪಡಿಸಲಾಗಿದೆ ಎಂಬುದು ಗಮನಾರ್ಹವಾಗಿದೆ ಎಂದು ಮೋದಿ ಹೇಳಿದರು.
ಕಳೆದ ದಶಕದಲ್ಲಿ ಈ ಆಂದೋಲನವನ್ನು ಯಶಸ್ವಿಗೊಳಿಸಲು ಅವಿರತವಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಸುಧಾರಣೆಗಳಲ್ಲಿ ಭಾರತದ ದಾಪುಗಾಲು ಮುಂದುವರಿಯುತ್ತದೆ ಮತ್ತು ನಾವು ಒಟ್ಟಾಗಿ ಆತ್ಮನಿರ್ಭರ್ ಮತ್ತು ವಿಕ್ಷಿತ್ ಭಾರತವನ್ನು ನಿರ್ಮಿಸುತ್ತೇವೆ ಎಂದು ಅವರು ಹೇಳಿದರು.
Today, we mark #10YearsOfMakeInIndia. I compliment all those who are tirelessly working to make this movement a success over the last decade. ‘Make in India’ illustrates the collective resolve of 140 crore Indians to make our nation a powerhouse of manufacturing and innovation.…
— Narendra Modi (@narendramodi) September 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.