ಬೈರುತ್: ಇತ್ತೀಚಿನ ವೈಮಾನಿಕ ದಾಳಿಗಳು ಮತ್ತು ಸಂವಹನ ಸಾಧನಗಳಲ್ಲಿ ಸ್ಫೋಟ ಘಟನೆಗಳ ನಂತರ ಮುಂದಿನ ಸೂಚನೆ ಬರುವವರೆಗೂ ಲೆಬನಾನ್ಗೆ ಪ್ರಯಾಣಿಸದಂತೆ ಬೈರುತ್ನಲ್ಲಿರುವ ಭಾರತದ ರಾಯಭಾರ ಕಚೇರಿ ಬುಧವಾರ ಭಾರತೀಯರಿಗೆ ಸಲಹಾ ಸೂಚನೆ ನೀಡಿದೆ.
“1 ಆಗಸ್ಟ್ 2024 ರಂದು ನೀಡಲಾದ ಸಲಹೆಯ ಪುನರಾವರ್ತನೆಯಾಗಿ ಮತ್ತು ಈ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳು ಮತ್ತು ಹಿಂಸೆ ಉಲ್ಬಣಗಳ ದೃಷ್ಟಿಯಿಂದ, ಮುಂದಿನ ಸೂಚನೆ ಬರುವವರೆಗೂ ಲೆಬನಾನ್ಗೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಬಲವಾದ ಸಲಹೆ ನೀಡಲಾಗಿದೆ” ಎಂದು ರಾಯಭಾರ ಕಚೇರಿಯು ತಮ್ಮ ಸೂಚನೆಯಲ್ಲಿ ತಿಳಿಸಿದೆ.
ಅವರು ಲೆಬನಾನ್ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಿದ್ದಾರೆ. ಅಲ್ಲದೇ ಅಲ್ಲಿಯೇ ವಾಸಮಾಡಬೇಕಾ ಜನರು ತೀವ್ರ ಎಚ್ಚರಿಕೆಯಿಂದ ಇರಬೇಕು ಮತ್ತು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಎಂದು ಸಲಹೆ ನೀಡಲಾಗಿದೆ.
Advisory dated 25.09.2024 pic.twitter.com/GFUVYaqgzG
— India in Lebanon (@IndiaInLebanon) September 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.