ಬೆಂಗಳೂರು: ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಮೈಸೂರು ಲೋಕಾಯುಕ್ತ ಎಸ್ಪಿ ಅವರಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಸಿದ್ದರಾಮಯ್ಯ ಅವರು ಪ್ರಕರಣದಲ್ಲಿ ಎ 1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎ 2 ಆರೋಪಿಯಾಗಿದ್ದಾರೆ. ಸಿಎಂ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಎ-3 ಆರೋಪಿಯಾಗಿದ್ದಾರೆ.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಕರ್ನಾಟಕ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ನ ಈ ಹೆಜ್ಜೆ ಸಿದ್ದರಾಮಯ್ಯನವರು ತನಿಖೆ ಎದುರಿಸುವಂತೆ ಮಾಡಿದೆ. ಅಲ್ಲದೆ ಅವರ ಸಿಎಂ ಕುರ್ಚಿಗೂ ಕುತ್ತು ತಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.