ನವದೆಹಲಿ: ಖ್ಯಾತ ಸಾವಯವ ಕೃಷಿ ಮಹಿಳೆ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಆರ್.ಪಪ್ಪಮ್ಮಾಳ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಪೋಸ್ಟ್ ಮಾಡಿರುವ ಪಿಎಂ ಮೋದಿ ಅವರು, “ಪಪ್ಪಮ್ಮಾಳ್ ಜಿ ಅವರ ನಿಧನದಿಂದ ತೀವ್ರ ನೋವಾಗಿದೆ. ಅವರು ಕೃಷಿಯಲ್ಲಿ, ವಿಶೇಷವಾಗಿ ಸಾವಯವ ಕೃಷಿಯಲ್ಲಿ ಛಾಪು ಮೂಡಿಸಿದ್ದಾರೆ. ಅವರ ನಮ್ರತೆ ಮತ್ತು ದಯೆಯಿಂದ ಜನರು ಅವರನ್ನು ಮೆಚ್ಚಿದ್ದಾರೆ. ನನ್ನ ಸಂತಾಪ ಅವರ ಕುಟುಂಬದೊಂದಿಗೆ ಇವೆ” ಎಂದಿದ್ದಾರೆ.
109 ನೇ ವಯಸ್ಸಿನಲ್ಲಿ, ಪಪ್ಪಮ್ಮಾಳ್ ಕೊಯಮತ್ತೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಆಕೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮಾರ್ಚ್ 2023 ರಲ್ಲಿ, ಪಪ್ಪಮ್ಮಾಳ್ ಜಾಗತಿಕ ಸಿರಿಧಾನ್ಯ ಸಮ್ಮೇಳನದಲ್ಲಿ ಭಾಗವಹಿಸಲು ನವದೆಹಲಿಗೆ ಆಗಮಿಸಿದ್ದ ವೇಳೆ ಪಿಎಂ ಮೋದಿ ಅವರನ್ನು ಭೇಟಿ ಮಾಡಿದ್ದರು ಮತ್ತು ಸುಸ್ಥಿರ ಕೃಷಿ ಮತ್ತು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸಲು ಸಿರಿಧಾನ್ಯ ಕೃಷಿ ಮತ್ತು ಬಳಕೆಯನ್ನು ಉತ್ತೇಜಿಸುವ ಮಹತ್ವವನ್ನು ಒತ್ತಿ ಹೇಳಿದ್ದರು.
2021 ರಲ್ಲಿ, ಭಾರತದಲ್ಲಿ ಸಾವಯವ ಕೃಷಿಯನ್ನು ಜನಪ್ರಿಯಗೊಳಿಸಿದ್ದಕ್ಕಾಗಿ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ನೀಡಲಾಯಿತು.
1970 ರಿಂದ 45 ವರ್ಷಗಳ ಕಾಲ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ರೈತರ ಸಮಾಲೋಚನಾ ಸಮಿತಿಯ ಸದಸ್ಯರಾಗಿ ತಮಿಳುನಾಡು ಕೃಷಿ ವಿಶ್ವವಿದ್ಯಾಲಯದೊಂದಿಗೆ ನಿಕಟವಾಗಿ ಕೆಲಸ ಮಾಡಿದ ಪಪ್ಪಮ್ಮಾಳ್ ತನ್ನ ಕೊನೆಯ ಉಸಿರು ಇರುವವರೆಗೂ ಕೃಷಿ ಕ್ಷೇತ್ರಗಳಲ್ಲಿ ಶ್ರಮಿಸಿದರು.
Deeply pained by the passing away of Pappammal Ji. She made a mark in agriculture, especially organic farming. People admired her for her humility and kind nature. My thoughts are with her family and well wishers. Om Shanti. pic.twitter.com/3JR9LqlMmB
— Narendra Modi (@narendramodi) September 27, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.