ನವದೆಹಲಿ: ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಮ್ಮು ಮತ್ತು ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕಿದ್ದಾರೆ. ಅವರ ಹೇಳಿಕೆಗೆ ಭಾರತವು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ನಿರಂತರ ಬೆಂಬಲವು “ಅನಿವಾರ್ಯವಾಗಿ ಪರಿಣಾಮಗಳನ್ನು ಆಹ್ವಾನಿಸುತ್ತದೆ” ಎಂದು ಹೇಳುವ ಮೂಲಕ ಕಟುವಾಗಿ ಪ್ರತಿಕ್ರಿಯಿಸಿದೆ.
ವಿಶ್ವಸಂಸ್ಥೆಯ ಭಾರತದ ಮೊದಲ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ಪ್ರತಿಕ್ರಿಯೆ ನೀಡಿ, ಜಾಗತಿಕ ಭಯೋತ್ಪಾದನೆಯಲ್ಲಿ ಪಾಕಿಸ್ತಾನದ ಸಹಭಾಗಿತ್ವ ಇರುವ ಬಗ್ಗೆ ಆರೋಪಿಸಿದರು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ರಾಜ್ಯ ನೀತಿಯಾಗಿ ಬಳಸುವ ಪಾಕಿಸ್ಥಾನದ ಸುದೀರ್ಘ ಇತಿಹಾಸದ ಬಗ್ಗೆ ಉಲ್ಲೇಖಿಸಿದರು.
“ಈ ಅಸೆಂಬ್ಲಿ ಇಂದು ಬೆಳಿಗ್ಗೆ ವಿಷಾದನೀಯವಾಗಿ ವಿಡಂಬನೆಗೆ ಸಾಕ್ಷಿಯಾಯಿತು. ಭಯೋತ್ಪಾದನೆ, ಮಾದಕ ದ್ರವ್ಯ ವ್ಯಾಪಾರ ಮತ್ತು ಅಂತರರಾಷ್ಟ್ರೀಯ ಅಪರಾಧಗಳಿಗೆ ಜಾಗತಿಕ ಖ್ಯಾತಿಯನ್ನು ಹೊಂದಿರುವ ಮಿಲಿಟರಿಯಿಂದ ನಡೆಸಲ್ಪಡುತ್ತಿರುವ ದೇಶವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುವ ದುಸ್ಸಾಹಸ ಮಾಡುತ್ತಿದೆ. ಪಾಕಿಸ್ತಾನ ನಿಜವಾಗಿಯೂ ಏನೆಂದು ಜಗತ್ತು ಸ್ವತಃ ನೋಡಬಹುದು” ” ಎಂದಿದ್ದಾರೆ.
ವಿಶ್ವಾದ್ಯಂತ ನಡೆಯುತ್ತಿರುವ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ಪಾಕಿಸ್ತಾನದ ಬೆರಳಚ್ಚುಗಳಿವೆ ಎಂದು ಮಂಗಳಾನಂದನ್ ಹೇಳಿದ್ದಾರೆ. “ಬಹುಶಃ ಈ ಪವಿತ್ರ ಸಭಾಂಗಣದಲ್ಲಿ ಅದರ ಪ್ರಧಾನ ಮಂತ್ರಿ ಹೀಗೆ ಮಾತನಾಡುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೂ ಅವರ ಮಾತುಗಳು ನಮಗೆಲ್ಲರಿಗೂ ಸ್ವೀಕಾರಾರ್ಹವಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸಬೇಕು. ಪಾಕಿಸ್ತಾನವು ಸತ್ಯವನ್ನು ಇನ್ನಷ್ಟು ಸುಳ್ಳಿನ ಮೂಲಕ ಎದುರಿಸಲು ಪ್ರಯತ್ನಿಸುತ್ತದೆ ಎಂದು ನಮಗೆ ತಿಳಿದಿದೆ. ನಮ್ಮ ನಿಲುವು ಸ್ಪಷ್ಟವಾಗಿದೆ ಮತ್ತು ಅದನ್ನು ಪುನರಾವರ್ತನೆ ಮಾಡುವ ಅಗತ್ಯವಿಲ್ಲ”ಎಂದು ಅವರು ಹೇಳಿದ್ದಾರೆ.
Watch: India exercises its Right of Reply at the 79th session of the @UN General Assembly debate.@DrSJaishankar @MEAIndia pic.twitter.com/c6g4HAKTBg
— India at UN, NY (@IndiaUNNewYork) September 28, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.