ನವದೆಹಲಿ: ಮೋದಿ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾನು ಸಾಯುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟೀಕಿಸಿದ್ದಾರೆ, ಪ್ರಧಾನಿ ಅವರ ಮೇಲಿನ ದ್ವೇಷವು ಸ್ಪಷ್ಟವಾಗಿ ಕಾಣುತ್ತಿದೆ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಪ್ರಚಾರದ ಅಂತಿಮ ದಿನದ ಭಾಷಣದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಅವರನ್ನು ‘ಅಸಹ್ಯ ಮತ್ತು ಅವಮಾನಕರ’ ರೀತಿಯಲ್ಲಿ ಎಂದು ಟೀಕಿಸಿದ್ದಾರೆ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.
“ನಿನ್ನೆ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಸಂಪೂರ್ಣವಾಗಿ ಅಸಹ್ಯಕರ ಮತ್ತು ಅವಮಾನಕರ ಹೇಳಿಕೆ ನೀಡಿದ್ದಾಎ. ದ್ವೇಷದ ಕಹಿ ಪ್ರದರ್ಶನ ಮಾಡಿರುವ ಅವರು, ಅನಗತ್ಯವಾಗಿ ಪ್ರಧಾನಿ ಮೋದಿಯನ್ನು ತಮ್ಮ ವೈಯಕ್ತಿಕ ಆರೋಗ್ಯ ವಿಷಯಗಳಿಗೆ ಎಳೆದು ತಂದಿದ್ದಾರೆ. ಪ್ರಧಾನಿ ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೇ ಸಾಯುತ್ತೇನೆ ಎನ್ನುವ ಹೇಳಿಕೆ ಅಸಹ್ಯಕರವಾದುದು” ಎಂದಿದ್ದಾರೆ.
“ಈ ಕಾಂಗ್ರೆಸ್ ಜನರು ಪ್ರಧಾನಿ ಮೋದಿಯವರ ಬಗ್ಗೆ ಎಷ್ಟು ದ್ವೇಷ ಮತ್ತು ಭಯವನ್ನು ಹೊಂದಿದ್ದಾರೆ, ಅವರು ನಿರಂತರವಾಗಿ ಮೋದಿ ಬಗ್ಗೆಯೇ ಯೋಚಿಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಖರ್ಗೆ ಅವರ ಆರೋಗ್ಯಕ್ಕಾಗಿ ಮೋದಿ, ನಾನು ಮತ್ತು ನಾವೆಲ್ಲರೂ ಪ್ರಾರ್ಥಿಸುತ್ತೇವೆ. ಅವರು ದೀರ್ಘ, ಆರೋಗ್ಯಕರ ಜೀವನವನ್ನು ನಡೆಸುತ್ತಾರೆ ಮತ್ತು ಅವರು ಅನೇಕ ವರ್ಷಗಳ ಕಾಲ ಬದುಕಲಿ ಮತ್ತು 2047 ರ ವೇಳೆಗೆ ವಿಕಸಿತ ಭಾರತವನ್ನು ನೋಡಲಿ” ಎಂದಿದ್ದಾರೆ.
Yesterday, the Congress President Shri Mallikarjun Kharge Ji has outperformed himself, his leaders and his party in being absolutely distasteful and disgraceful in his speech.
In a bitter display of spite, he unnecessarily dragged PM Modi into his personal health matters by…
— Amit Shah (@AmitShah) September 30, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.