ಬೆಂಗಳೂರು: ಕಳೆದ ಆರು ವರ್ಷಗಳಿಂದ ಸುಳ್ಳು ಗುರುತಿನಡಿಯಲ್ಲಿ ಬೆಂಗಳೂರು ಹೊರವಲಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ಥಾನಿ ಪ್ರಜೆ, ಆತನ ಪತ್ನಿ ಮತ್ತು ಇತರರನನು ಬಂಧಿಸಲಾಗಿದೆ. ವ್ಯಕ್ತಿಯ ಪತ್ನಿ ಬಾಂಗ್ಲಾದೇಶ ಮೂಲದವಳು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ ಮತ್ತು ದಂಪತಿಗಳು 2014 ರಲ್ಲಿ ದೆಹಲಿಗೆ ಮತ್ತು ನಂತರ 2018 ರಲ್ಲಿ ಬೆಂಗಳೂರಿಗೆ ಬಂದಿದ್ದಾರೆ. ಅದಕ್ಕೂ ಮುನ್ನ ಢಾಕಾದಲ್ಲಿ ವಾಸಿಸುತ್ತಿದ್ದರು.
ಬೆಂಗಳೂರು ಉಪನಗರದ ಜಿಗಣಿಯಲ್ಲಿ ಪೊಲೀಸರು ದಾಳಿ ನಡೆಸಿದ ನಂತರ ಅವರ ಬಂಧನ ನಡೆದಿದೆ. ನಕಲಿ ಗುರುತಿನ ದಾಖಲೆಗಳನ್ನು ಬಳಸಿಕೊಂಡು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು ಎಂದು ವರದಿಯಾಗಿದೆ. ‘ನಮ್ಮ ಜಿಗಣಿ ಇನ್ಸ್ ಪೆಕ್ಟರ್ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಲ್ವರು ಕುಟುಂಬದ ಸದಸ್ಯರು ನಕಲಿ ದಾಖಲೆಗಳೊಂದಿಗೆ ಇಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದರು. ನಾವು ಈಗ ಅವರನ್ನು ವಿಚಾರಣೆ ನಡೆಸುತ್ತಿದ್ದೇವೆ ಮತ್ತು ಪತ್ತೆಯಾದ ಆಧಾರಗಳ ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈತ ಗ್ಯಾರೇಜ್ಗೆ ಸಾಮಾಗ್ರಿಗಳನ್ನು ಸರಬರಾಜು ಮಾಡುತ್ತಿರುವುದು ಕಂಡುಬಂದಿದ್ದರಿಂದ ಪೊಲೀಸರು ವ್ಯಕ್ತಿಯ ಸಂಪರ್ಕಗಳು ಮತ್ತು ಚಟುವಟಿಕೆಗಳನ್ನು ಪರಿಶೀಲಿಸುತ್ತಿದ್ದಾರೆ. ‘ನಾವು ಸಾಕಷ್ಟು ಮಾಹಿತಿಯನ್ನು ಸಂಗ್ರಹಿಸಿದ್ದೇವೆ ಮತ್ತು ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಅವರ ಮನೆಯಿಂದ ವಶಪಡಿಸಿಕೊಂಡ ವಸ್ತುಗಳನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.