ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.
ಕಿಶೋರ್ ಕುಮಾರ್ ಪುತ್ತೂರು ಅವರು ರಾಜ್ಯ ಶಾಸ್ತ್ರದಲ್ಲಿ ಸ್ನಾತಕೋತರ ಪದವಿ ಪಡೆದಿರುತ್ತಾರೆ. ವಿದ್ಯಾರ್ಥಿ ಜೀವನದಲ್ಲೇ ಆರ್ ಎಸ್ ಎಸ್ ಮತ್ತು ಎಬಿವಿಪಿ ಯ ಕಡೆ ಒಲವು ಹೊಂದಿದ್ದ ಕಿಶೋರ್ ಕುಮಾರ್ ಪುತ್ತೂರು ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾ ಬಂದಿದ್ದಾರೆ.
2011ರಲ್ಲಿ ‘ಕಾಶ್ಮೀರ ಚಲೋ’ ಎಂಬ ಕಾರ್ಯಕ್ರಮದಲ್ಲಿ ಪ್ರತಿನಿಧಿಯಾಗಿ ಭಾಗವಹಿಸಿದ್ದರು. 2009 ರಲ್ಲಿ ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾ ಅಭ್ಯರ್ಥಿಯಾಗಿ ಆಯ್ಕೆಯಾಗಿ, 2014 ರಿಂದ ಭಾರತೀಯ ಜನತಾ ಯುವ ಮೋರ್ಚಾದ ವಿಭಾಗದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಪ್ರಿಯರಾದರು.
ಪುತ್ತೂರು ತಾಲೂಕಿನಲ್ಲಿ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದ ಅನುಭವ, ಪ್ರಮುಖರ ಗೆಲುವಿಗೆ ಶ್ರಮಿಸಿದಲ್ಲದೆ, ಗ್ರಾಮೀಣ ಪ್ರದೇಶದ ಅಭಿವೃದ್ದಿಗಾಗಿ ದುಡಿದ ಕಾರಣ ವೈಯಕ್ತಿಕ ವರ್ಚಸ್ಸು ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.