ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ದಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಎಸ್ಐಟಿಯು ಇಬ್ಬರು ಸಿಬಿಐ ಅಧಿಕಾರಿಗಳು, ಇಬ್ಬರು ರಾಜ್ಯ ಪೊಲೀಸ್ ಅಧಿಕಾರಿಗಳು ಮತ್ತು ಕೇಂದ್ರ ಆಹಾರ ನಿಯಂತ್ರಕ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ಹಿರಿಯ ಅಧಿಕಾರಿಯನ್ನು ಒಳಗೊಂಡಿರುತ್ತದೆ.
ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಈ ವಿಷಯದಲ್ಲಿ ರಾಜಕೀಯ ನಾಟಕವನ್ನು ಬಯಸುವುದಿಲ್ಲ ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ. ಇಂತಹ ಆರೋಪಗಳು ವಿಶ್ವಾದ್ಯಂತ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದಿದೆ.
“ನ್ಯಾಯಾಲಯವನ್ನು ರಾಜಕೀಯ ರಣಾಂಗಣವಾಗಿ ಬಳಸಲು ನಾವು ಅನುಮತಿಸುವುದಿಲ್ಲ. ಕೋಟಿಗಟ್ಟಲೆ ಜನರ ಭಾವನೆಗಳಿಗೆ ನೋವುಂಟಾಗಿದೆ, ಹೀಗಾಗಿ ಸ್ವತಂತ್ರ ಎಸ್ಐಟಿಯಿಂದ ತನಿಖೆ ನಡೆಸುವುದನ್ನು ನಾವು ಬಯಸುತ್ತೇವೆ. ರಾಜ್ಯ ಪೊಲೀಸ್, ಸಿಬಿಐ ಮತ್ತು ಎಫ್ಎಸ್ಎಸ್ಎಐನ ಪ್ರತಿನಿಧಿಗಳು ತನಿಖೆಯನ್ನು ಸಿಬಿಐ ನಿರ್ದೇಶಕರ ಅಡಿಯಲ್ಲಿ ನಡೆಸಬೇಕೆಂದು ನಾವು ನಿರ್ದೇಶಿಸುತ್ತೇವೆ”ಎಂದು ನ್ಯಾಯಮೂರ್ತಿ ಗವಾಯಿ ಹೇಳಿದ್ದಾರೆ.
ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ಆಡಳಿತದಲ್ಲಿ ದೇವಾಲಯದಲ್ಲಿ ಲಡ್ಡೂ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ ಭಾರೀ ದೊಡ್ಡ ವಿವಾದ ಭುಗಿಲೆದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.