ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದು ಕಡೆ ಮಾದಕ ದ್ರವ್ಯ ಮುಕ್ತ ಭಾರತಕ್ಕಾಗಿ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ. ಆದರೆ ಮತ್ತೊಂದೆಡೆ ಕಾಂಗ್ರೆಸ್ ಯುವಕರನ್ನು ಮಾದಕವ್ಯಸನದತ್ತ ಎಳೆದು ತರುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ.
ದೆಹಲಿಯಲ್ಲಿ ಇತ್ತೀಚಿಗೆ ವಶಪಡಿಸಿಕೊಂಡ 5600 ಕೋಟಿ ರೂಪಾಯಿಗಳ ಮಾದಕವಸ್ತು ರವಾನೆಯಲ್ಲಿ ಪ್ರಮುಖ ಕಾಂಗ್ರೆಸ್ ನಾಯಕನ ಕೈವಾಡವಿರುವ ಬಗ್ಗೆ ಬಿಜೆಪಿ ಆರೋಪಿಸಿದ ಬೆನ್ನಲ್ಲೇ ಅಮಿತ್ ಶಾ ಅವರು ಈ ಹೇಳಿಕೆ ನೀಡಿದ್ದಾರೆ. ಇದು ಭಾರತ ಅತ್ಯಂತ ಅಪಾಯಕಾರಿ ಮತ್ತು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ ಅವರು, ಮೋದಿ ಸರ್ಕಾರವು ಯುವಕರನ್ನು ಕ್ರೀಡೆ, ಶಿಕ್ಷಣ ಮತ್ತು ನಾವೀನ್ಯತೆಯತ್ತ ಕೊಂಡೊಯ್ಯುತ್ತಿದ್ದರೆ, ಕಾಂಗ್ರೆಸ್ ಅವರನ್ನು ಡ್ರಗ್ಸ್ನ ಕತ್ತಲೆಯ ಜಗತ್ತಿಗೆ ಕೊಂಡೊಯ್ಯಲು ಬಯಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಡ್ರಗ್ಸ್ ನಿಂದಾಗಿ ಪಂಜಾಬ್, ಹರಿಯಾಣ ಹಾಗೂ ಇಡೀ ಉತ್ತರ ಭಾರತದ ಯುವಕರು ಪಡುತ್ತಿರುವ ದುಸ್ಥಿತಿಯನ್ನು ಎಲ್ಲರೂ ನೋಡಿದ್ದಾರೆ ಎಂದಿದ್ದಾರೆ.
ಡ್ರಗ್ ಡೀಲರ್ಗಳ ರಾಜಕೀಯ ಸ್ಥಾನಮಾನ ಅಥವಾ ಅಂತಸ್ತು ನೋಡದೆ, ಇಡೀ ಡ್ರಗ್ಸ್ ಜಾಲವನ್ನು ನಾಶಪಡಿಸುವ ಮೂಲಕ ಭಾರತವನ್ನು ಡ್ರಗ್ಸ್ ಮುಕ್ತ ದೇಶವನ್ನಾಗಿ ಮಾಡಲು ಸರ್ಕಾರ ಸಂಕಲ್ಪ ಮಾಡಿದೆ ಎಂದು ಗೃಹ ಸಚಿವರು ಪುನರುಚ್ಛರಿಸಿದ್ದಾರೆ.
एक ओर जहाँ मोदी सरकार 'नशामुक्त भारत' के लिए जीरो टॉलरेंस की नीति अपना रही है, वहीं उत्तर भारत से पकड़ी गई ड्रग्स की ₹5,600 करोड़ की खेप में कांग्रेस के एक प्रमुख व्यक्ति की संलिप्तता बेहद खतरनाक और शर्मनाक है।
कांग्रेस के शासन में ड्रग्स से पंजाब, हरियाणा और समग्र उत्तर भारत…
— Amit Shah (@AmitShah) October 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.