ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶುಕ್ರವಾರದಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ X ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು, “4 ಅಕ್ಟೋಬರ್ 2024 ರಂದು, ಒಳನುಸುಳುವಿಕೆ ಯತ್ನದ ಬಗ್ಗೆ ಗುಪ್ತಚರ ಆಧಾರದ ಮೇಲೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯನ್ನು ಕುಪ್ವಾರದ ಗುಗಲ್ಧಾರ್ನಲ್ಲಿ ಪ್ರಾರಂಭಿಸಲಾಯಿತು. ಅನುಮಾನಸ್ಪದ ಚಟುವಟಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಸೇನೆ ಗುಂಡು ಹಾರಿಸಿತ. ಇದು ಭಯೋತ್ಪಾದಕರೊಂದಿಗೆ ಗುಂಡಿನ ವಿನಿಮಯಕ್ಕೆ ದಾರಿ ಮಾಡಿಕೊಟ್ಟಿತು” ಎಂದಿದೆ.
ಅಧಿಕಾರಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರವನ್ನು ಅನುಸರಿಸಿ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಗ್ರಾಮದಲ್ಲಿ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿತ್ತು.
OP GUGALDHAR, #Kupwara
On 04 Oct 2024, based on intelligence about infiltration attempt, a joint operation by the #IndianArmy and @JmuKmrPolice was launched at Gugaldhar, Kupwara. Alert troops spotted suspicious activity and challenged, leading to exchange of firing with… pic.twitter.com/64ZCSoiOEj
— Chinar Corps🍁 – Indian Army (@ChinarcorpsIA) October 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.