ವಾಷಿಂಗ್ಟನ್: ಇತ್ತೀಚಿಗೆ ಇರಾನ್ ನಡೆಸಿರುವ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಇರಾನ್ನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಬೇಕು ಎಂದು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಸಂಪೂರ್ಣ ಯುದ್ಧ ಅಸಂಭವವಾಗಿದೆ ಮತ್ತು ಅದನ್ನು ತಪ್ಪಿಸಬೇಕು ಎಂದು ಅಧ್ಯಕ್ಷ ಜೋ ಬಿಡೆನ್ ಹೇಳಿದ ನಂತರ ಅವರ ಹೇಳಿಕೆಗಳು ಬಂದಿದೆ.
ಮೊದಲು ಇಸ್ರೇಲ್ ಇರಾನಿನ ಪರಮಾಣು ಸ್ಥಾವರಗಳನ್ನು ಗುರಿಯಾಗಿಸಿ ದಾಳಿ ಮಾಡಬೇಕು ಮತ್ತು ನಂತರ ಎಲ್ಲದರ ಬಗ್ಗೆ ಯೋಚಿಸಬೇಕು ಎಂದು ಟ್ರಂಪ್ ಸಲಹೆ ನೀಡಿದ್ದಾರೆ.
200-ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ನ ಪರಮಾಣು ಕೇಂದ್ರಗಳನ್ನು ಇಸ್ರೇಲ್ ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಅಧ್ಯಕ್ಷ ಬಿಡೆನ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಯನ್ನು ಉಲ್ಲೇಖಿಸಿ ಟ್ರಂಪ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನೊಂದೆಡೆ ಜೋ ಬಿಡೆನ್ ಅವರು, “ನಾವು ಈಗಾಗಲೇ ಇಸ್ರೇಲ್ಗೆ ಸಾಕಷ್ಟು ಸಹಾಯ ಮಾಡಿದ್ದೇವೆ. ನಾವು ಇಸ್ರೇಲ್ ಅನ್ನು ರಕ್ಷಿಸಲಿದ್ದೇವೆ” ಎಂದಿದ್ದಾರೆ.
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ, ಇಸ್ರೇಲ್ ಮೇಲಿನ ಇರಾನ್ನ ದಾಳಿಯನ್ನು “ನ್ಯಾಯಸಮ್ಮತ ಮತ್ತು ಕಾನೂನುಬದ್ಧ” ಮತ್ತು “ಇಸ್ರೇಲ್ನ ಅಪರಾಧಗಳಿಗೆ” ಕನಿಷ್ಠ ಶಿಕ್ಷೆ ಎಂದು ಕರೆದಿದ್ದಾನೆ.
ಆದರೆ ಇಸ್ರೇಲ್ ಇರಾನಿನ ಈ ದಾಳಿಗೆ ಅತ್ಯಂತ ವ್ಯಾಘ್ರ ರೀತಿಯಲ್ಲಿ ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.