ನವದೆಹಲಿ:ಅಧಿಕೃತ ಆದೇಶದ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ ತರುವಾಯ ಈ ಬೆಳವಣಿಗೆ ನಡೆದಿದೆ.
ಭಾನುವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಕೇಂದ್ರ ಹಿಂಪಡೆದಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದೆ. ಈ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ವರದಿಗಳು ತಿಳಿಸಿವೆ.
ಜೂನ್ 19, 2018 ರಂದು ಪಿಡಿಪಿ-ಬಿಜೆಪಿ ಮೈತ್ರಿ ಮುರಿದುಬಿದ್ದ ನಂತರ ಇಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಯಿತು.
ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಜಮ್ಮು-ಕಾಶ್ಮೀರದಲ್ಲಿ ಹೊಸ ಸರ್ಕಾರವನ್ನು ರಚಿಸುವ ಹಕ್ಕು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಬಹುಮತ ಪಡೆದಿದೆ.
2019 ರಲ್ಲಿ ಆರ್ಟಿಕಲ್ 370 ಮತ್ತು 35-ಎ ರದ್ದತಿ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾದ ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರಗಳಾಗಿ ವಿಭಜಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಚುನಾಯಿತ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.