ನವದೆಹಲಿ: ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಭಾನುವಾರ ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸುಮಾರು 70 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕೇಂದ್ರ ಸರ್ಕಾರದ ಭಾರತ್ ದರ್ಶನ್ ಕಾರ್ಯಕ್ರಮದಡಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಗಳೊಂದಿಗೆ ಸುಮಾರು 70 ವಿದ್ಯಾರ್ಥಿಗಳು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದಾರೆ. ಇವರಲ್ಲಿ ಅರ್ಧದಷ್ಟು ವಿದ್ಯಾರ್ಥಿಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟವರ ಕುಟುಂಬಗಳಿಂದ ಬಂದವರು.
ಸಭೆಯಲ್ಲಿ, ಡಾ ಸಿಂಗ್ ಅವರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು, ಹೊಸದನ್ನು ಕಲಿಯಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
“ಸ್ಟಾರ್ಟ್-ಅಪ್ ಮಾರ್ಗಗಳು ಮತ್ತು ಸಮಾಜದ ವಿವಿಧ ವಿಭಾಗಗಳಲ್ಲಿ ಹೊಸ ಬೆಳವಣಿಗೆಗಳ ಬಗ್ಗೆ ಪರಿಚಯ ಮಾಡಿಕೊಳ್ಳಿ. ವಿಜ್ಞಾನ ಮತ್ತು ತಂತ್ರಜ್ಞಾನ, ಜೀವರಸಾಯನಶಾಸ್ತ್ರ, ಕೃತಕ ಬುದ್ಧಿಮತ್ತೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನದಂತಹ ಕ್ಷೇತ್ರಗಳ ಮೇಲೆ ಒಲವು ಬೆಳೆಸಿಕೊಳ್ಳಿ. ಮಾಹಿತಿ ಮತ್ತು ಜ್ಞಾನವನ್ನು ಪಡೆಯಲು ಮಾತ್ರ ಸ್ಮಾರ್ಟ್ಫೋನ್ಗಳ ಬಳಕೆಗೆ ಒತ್ತು ನೀಡಬೇಕು” ಎಂದು ಜಿತೇಂದ್ರ ಸಿಂಗ್ ಅವರು ಮಕ್ಕಳಿಗೆ ಸಲಹೆ ನೀಡಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಂತಹ ಯೋಜನೆಗಳನ್ನು ಸಚಿವರು ಪ್ರಸ್ತಾಪಿಸಿದರು, ಇದು ಪೂರ್ವಜರ ಕೌಶಲ್ಯಗಳನ್ನು ಪಡೆಯಲು ಮತ್ತು ಅದರಿಂದಲೇ ಜೀವನೋಪಾಯ ಗಳಿಸಲು ಹೇಗೆ ಸಹಾಯ ಮಾಡುತ್ತದೆ ಎಂದು ವಿವರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.