ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಶಾಸಕರ ಭವನದಲ್ಲಿರುವ ಮಹರ್ಷಿ ವಾಲ್ಮೀಕಿ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಾಲಾರ್ಪಣೆ ಮಾಡಿದರು.
ರಾಜ್ಯದ ಎಲ್ಲಾ ವಸತಿ ಶಾಲೆಗಳಿಗೆ ‘ಮಹರ್ಷಿ ವಾಲ್ಮೀಕಿ ವಸತಿ ಶಾಲೆಗಳು’ ಎಂದು ಮರುನಾಮಕರಣ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ಸಿಎಂ ಘೋಷಿಸಿದರು.
“ಕರ್ನಾಟಕದ ಎಲ್ಲಾ ಸರ್ಕಾರಿ ವಸತಿ ಶಾಲೆಗಳನ್ನು ಮಹರ್ಷಿ ವಾಲ್ಮೀಕಿ ವಸತಿ ಶಾಲೆಗಳು ಎಂದು ಮರುನಾಮಕರಣ ಮಾಡಲಾಗುವುದು, ರಾಯಚೂರು ವಿಶ್ವವಿದ್ಯಾಲಯವನ್ನು ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು”ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ತಮ್ಮ ಆಡಳಿತದ ಸಾಧನೆಗಳನ್ನು ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಅನುಕೂಲವಾಗುವ ಯೋಜನೆಗಳನ್ನು ತರಲಾಗಿದೆ ಎಂದು ಈ ಸಂದರ್ಭದಲ್ಲಿ ಒತ್ತಿ ಹೇಳಿದದಾರೆ. ಈ ಯೋಜನೆಗಳು ಸಂವಿಧಾನದ ಆಶಯದಂತೆ ಸಮಾಜದ ದುರ್ಬಲ ವರ್ಗಗಳನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಲಪಡಿಸಲು ವಿನ್ಯಾಸಗೊಳಿಸಲಾಗಿದೆ ಎಂದಿದ್ದಾರೆ. ಪ್ರತಿ ಫಲಾನುಭವಿ ಕುಟುಂಬವು ಐದು ಖಾತರಿ ಕಾರ್ಯಕ್ರಮಗಳ ಮೂಲಕ ವಾರ್ಷಿಕ ರೂ 40,000 ರಿಂದ ರೂ 50,000 ವರೆಗೆ ಆರ್ಥಿಕ ನೆರವು ಪಡೆಯುತ್ತಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.