ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ನವದೆಹಲಿಯಲ್ಲಿ ರೈತರು, ರೈತ ಸಂಘಟನೆಗಳು ಮತ್ತು ವಿವಿಧ ರಾಜ್ಯಗಳ ಸದಸ್ಯರು ಮತ್ತು ಪ್ರತಿನಿಧಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ಸಭೆಯ ಬಳಿಕ ಪ್ರತಿಕ್ರಿಯೆ ನೀಡಿದ ಸಚಿವರು, ಕೃಷಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ರೈತರೊಂದಿಗೆ ಗಂಭೀರವಾಗಿ ಚರ್ಚಿಸಲಾಗಿದೆ ಎಂದರು.
ರೈತರ ಏಳಿಗೆಗಾಗಿ ಸರ್ಕಾರ ಮಾಡಿದ ಎಲ್ಲಾ ಪ್ರಯತ್ನಗಳನ್ನು ವಿವರಿಸಿದರು. ಜೊತೆಗೆ ರಬಿ ಬೆಳೆಗಳ ಎಂಎಸ್ಪಿ ಅನ್ನು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದ ಬಗ್ಗೆ ಅವರು ರೈತರಿಗೆ ತಿಳಿಸಿದರು. ರೈತ ಸಂಘಟನೆಗಳು ಹಲವು ಪ್ರಮುಖ ವಿಷಯಗಳನ್ನು ಚರ್ಚಿಸಿ ರಚನಾತ್ಮಕ ಸಲಹೆಗಳನ್ನು ನೀಡಿವೆ ಎನ್ನಲಾಗಿದೆ.
ಒಂದು, ಎರಡು ಅಥವಾ ಎರಡೂವರೆ ಎಕರೆ ಜಮೀನು ಹೊಂದಿರುವವರಿಗೆ ಲಾಭದಾಯಕ ಕೃಷಿ ಪದ್ಧತಿಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬುದರ ಕುರಿತು ಶಿಕ್ಷಣ ನೀಡಲು ಮಾದರಿ ಕೃಷಿ ಕೃಷಿ ಕಾರ್ಯಕ್ರಮವನ್ನು ಅಭಿವೃದ್ಧಿಪಡಿಸಬೇಕು ಎಂದು ರೈತರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ನೀರು ಒದಗಿಸುವುದು, ರಸಗೊಬ್ಬರಗಳ ಬಳಕೆ, ಮಣ್ಣನ್ನು ಆರೋಗ್ಯವಾಗಿಡುವುದು, ಪ್ರಕೃತಿ ವಿಕೋಪದಿಂದ ಆಗುವ ಸಮಸ್ಯೆಗಳು, ಸಕ್ಕರೆ ಕಾರ್ಖಾನೆಗಳ ಮುಚ್ಚುವಿಕೆಯ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ.
ರೈತರು ಸಿರಿಧಾನ್ಯಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಸಲಹೆಗಳನ್ನೂ ಕೂಡ ಸಚಿವರಿಗೆ ನೀಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.