ನವದೆಹಲಿ: ಇಂದು ಪೊಲೀಸ್ ಸಂಸ್ಮರಣಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪೊಲೀಸ್ ಸಿಬ್ಬಂದಿಯ ಶೌರ್ಯ ಮತ್ತು ತ್ಯಾಗವನ್ನು ಕೊಂಡಾಡಿದ್ದಾರೆ. ಎಕ್ಸ್ ಪೋಸ್ಟ್ನಲ್ಲಿ, ಜನರ ಸುರಕ್ಷತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಪೊಲೀಸರ ಅಚಲವಾದ ಸಮರ್ಪಣೆಯನ್ನು ಶ್ಲಾಘಿಸಿದ್ದಾರಡ. ಪೊಲೀಸರು ಧೈರ್ಯ ಮತ್ತು ಸ್ಥೈರ್ಯವನ್ನು ನಿರೂಪಿಸುತ್ತಾರೆ ಎಂದು ಹೇಳಿದ್ದಾರೆ. ಮಾನವೀಯ ಸವಾಲುಗಳ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯ ಪೂರ್ವಭಾವಿ ಪ್ರಯತ್ನಗಳು ಮತ್ತು ಸಹಾಯವನ್ನು ಮೋದಿ ಶ್ಲಾಘಿಸಿದರು.
ಗೃಹ ಸಚಿವ ಅಮಿತ್ ಶಾ ಅವರು ಕರ್ತವ್ಯದ ಸಾಲಿನಲ್ಲಿ ತಮ್ಮ ಅತ್ಯುನ್ನತ ತ್ಯಾಗದಿಂದ ಅಮರರಾದ ಹುತಾತ್ಮರಿಗೆ ನಮಿಸಿದರು. ಎಕ್ಸ್ ಪೋಸ್ಟ್ ಮಾಡಿರುವ ಶಾ, ಇದು ರಾಷ್ಟ್ರವನ್ನು ಸುರಕ್ಷಿತವಾಗಿಡಲು ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳು ಮಾಡುವ ಅನಂತ ತ್ಯಾಗವನ್ನು ಗೌರವಿಸುವ ಸಂದರ್ಭವಾಗಿದೆ ಎಂದು ಹೇಳಿದರು. ಅವರು ದೇಶಕ್ಕಾಗಿ ಮಾಡಿದ ಎಲ್ಲಾ ತ್ಯಾಗಗಳಿಗೆ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು.
ಶಾ ಅವರು ಇಂದು ಬೆಳಿಗ್ಗೆ ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಸಮರ್ಪಿಸಿದರು ಮತ್ತು ಪೊಲೀಸ್ ಸ್ಮರಣಾರ್ಥ ದಿನದಂದು ಹುತಾತ್ಮರಿಗೆ ಗೌರವ ಸಲ್ಲಿಸಿದರು.
“36,468 ಪೊಲೀಸ್ ಸಿಬ್ಬಂದಿ ಕರ್ತವ್ಯದ ಸಾಲಿನಲ್ಲಿ ಅತ್ಯುನ್ನತ ತ್ಯಾಗ ಮಾಡಿದ್ದಾರೆ. ಕಳೆದ ವರ್ಷದಲ್ಲಿ 216 ಪೊಲೀಸ್ ಸಿಬ್ಬಂದಿ ಅತ್ಯುನ್ನತ ತ್ಯಾಗ ಮಾಡಿದ್ದಾರೆ. ಕಳೆದ ದಶಕದಲ್ಲಿ ವೀರ ಯೋಧರ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ಮತ್ತು ಎಡಪಂಥೀಯ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲಾಗಿದೆ. ಮೂರು ಹೊಸ ಕ್ರಿಮಿನಲ್ ಕಾನೂನುಗಳು ದೇಶದ ಅಪರಾಧ ವ್ಯವಸ್ಥೆಯು ವಿಶ್ವದಲ್ಲೇ ಅತ್ಯಂತ ಆಧುನಿಕವಾಗುವುದನ್ನು ಖಚಿತಪಡಿಸುತ್ತದೆ” ಎಂದು ಅವರು ಹೇಳಿದರು.
ಆರೋಗ್ಯ, ವಸತಿ ಮತ್ತು ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಅನೇಕ ಕಲ್ಯಾಣ ಯೋಜನೆಗಳನ್ನು ಮೋದಿ ಸರ್ಕಾರವು ಪೊಲೀಸರು ಮತ್ತು ಅವರ ಕುಟುಂಬಗಳಿಗಾಗಿ ನಡೆಸುತ್ತಿದೆ ಎಂದು ಶಾ ಹೇಳಿದರು. 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಧಾನಿಯವರ ಕನಸನ್ನು ನನಸು ಮಾಡಲು ದೇಶದ ಎಲ್ಲಾ ಪೊಲೀಸರು ಸಂಕಲ್ಪ ಮಾಡಿದ್ದಾರೆ, ಅವರ ಧೈರ್ಯ, ಸಮರ್ಪಣೆ, ಮತ್ತು ಶ್ರದ್ಧೆ ಈ ಗುರಿಯನ್ನು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
Today, on Police Commemoration Day, we honour the bravery and sacrifice of our police personnel. Their unwavering dedication ensures the safety of our people. They exemplify courage and determination. Their proactive efforts and assistance during humanitarian challenges are…
— Narendra Modi (@narendramodi) October 21, 2024
On #PoliceCommemorationDay, laid a wreath at the National Police Memorial and offered my solemn tributes to the martyrs of the nation’s police forces.
They have scripted an indelible history of patriotism with their selfless service and supreme sacrifice. Their lives will remain… pic.twitter.com/LihvtR9CiT
— Amit Shah (@AmitShah) October 21, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.