ಕಜಾನ್: ಇಸ್ರೇಲ್ ಮತ್ತು ಇರಾನ್ ಕೊನೆಯಿಲ್ಲದಂತೆ ಕಾದಾಟದಲ್ಲಿ ತೊಡಗಿರುವ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾದ ಕಜಾನ್ ನಗರದಲ್ಲಿ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾದರು.
ಈ ವೇಳೆ ಮೋದಿ ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಆಳವಾದ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸಂವಾದ ಮತ್ತು ರಾಜತಾಂತ್ರಿಕತೆಗೆ ಕರೆ ನೀಡಿದ್ದಾರೆ.
ವರ್ಷವಿಡೀ ನಡೆದ ಇಸ್ರೇಲ್-ಹಮಾಸ್ ಯುದ್ಧ ಮತ್ತು ಇಸ್ರೇಲ್-ಹೆಜ್ಬೊಲ್ಲಾ ಸಂಘರ್ಷದ ಮಧ್ಯೆ ಉಭಯ ನಾಯಕರ ನಡುವಿನ ಸಭೆ ನಡೆದಿದೆ. ಇರಾನ್ ಕೂಡ ಇಸ್ರೇಲ್ನೊಂದಿಗೆ ಕಾದಾಟ ನಡೆಸುತ್ತಲೇ ಇದೆ.
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಈ ಪ್ರದೇಶದಲ್ಲಿ ಶಾಂತಿಯ ಅಗತ್ಯವನ್ನು ಒತ್ತಿ ಹೇಳಿದರು ಮತ್ತು ಮಧ್ಯಪ್ರಾಚ್ಯ ಬಿಕ್ಕಟ್ಟನ್ನು ಉಲ್ಬಣಗೊಳಿಸುವಲ್ಲಿ ಭಾರತ ವಹಿಸಬಹುದಾದ ಪಾತ್ರವನ್ನು ವಿಶ್ಲೇಷಿಸಿದರು ಎನ್ನಲಾಗಿದೆ.
ಬಹುತೇಕ ಎಲ್ಲಾ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಹೊಂದಿರುವ ಭಾರತ, ಇಸ್ರೇಲ್ ಮತ್ತು ಇರಾನ್ ನಡುವೆ ಮಧ್ಯಸ್ಥಿಕೆ ವಹಿಸಲು ಸಾಧ್ಯವಾಗುವ ವಿಶಿಷ್ಟ ಸ್ಥಾನದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಾರಗಳ ಹಿಂದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದರು ಮತ್ತು ಇಂದು ಇರಾನ್ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.