ಕಜಾನ್: ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು 2019 ರ ನಂತರ ಇಂದು ಮೊದಲ ಬಾರಿಗೆ ರಷ್ಯಾ ಕಜಾನ್ನಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಚೀನಾ ಗಡಿರೇಖೆಯನ್ನು ಉಲ್ಲಂಘಿಸಿ ಅತಿಕ್ರಮಣಕ್ಕೆ ಮುಂದಾದ ಪರಿಣಾಮವಾಗಿ ಲಡಾಖ್ನಲ್ಲಿ ಮಿಲಿಟರಿ ಬಿಕ್ಕಟ್ಟು ತಲೆದೋರಿದ ನಂತರ ಭಾರತ ಮತ್ತು ಚೀನಾ ನಡುವಿನ ಸಂಬಂಧಗಳು ತೀವ್ರ ಹದಗೆಟ್ಟವು.
ರಷ್ಯಾದ ಕಜಾನ್ ನಗರದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್ಪಿಂಗ್ ನಡುವಿನ ದ್ವಿಪಕ್ಷೀಯ ಮಾತುಕತೆಗಳು ನಡೆದವು. ಉಭಯ ದೇಶಗಳ ನಡುವಣ ರಾಜತಾಂತ್ರಿಕ ಮತ್ತು ಮಿಲಿಟರಿ ಮಟ್ಟದ ಮಾತುಕತೆಗಳು ಪ್ರಗತಿ ಸಾಧಿಸಿದ 72 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ದ್ವಿಪಕ್ಷೀಯ ಸಭೆ ಸಂಭವಿಸಿದೆ.
ಗಡಿ ಮಾತುಕತೆಯಲ್ಲಿ ಭಾರತ ಮತ್ತು ಚೀನಾ ಮಹತ್ವದ ಪ್ರಗತಿ ಸಾಧಿಸಿದ್ದು, ಲಡಾಖ್ನಲ್ಲಿ ಸ್ಟ್ಯಾಂಡ್ ಆಫ್ ಪ್ರಾರಂಭವಾದ ಮೇ 2020 ರ ಮೊದಲು ಯಾವ ಸ್ಥಿತಿ ಇತ್ತೋ ಇನ್ನು ಮುಂದೆ ಅದನ್ನೇ ಮುಂದುವರೆಸಲು ಒಪ್ಪಿಕೊಂಡಿವೆ.
ಕಳೆದ ಕೆಲವು ವರ್ಷಗಳಿಂದ ಅನೇಕ ಅಡಚಣೆಗಳನ್ನು ಎದುರಿಸುತ್ತಿರುವ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಗಸ್ತು ವ್ಯವಸ್ಥೆಯಲ್ಲಿ ಒಮ್ಮತದ ನಂತರ ಭಾರತ-ಚೀನಾ ಸಂಬಂಧದಲ್ಲಿನ ಏರಿಕೆಯನ್ನು ಮೋದಿ-ಕ್ಸಿ ಜಿನ್ಪಿಂಗ್ ಸಭೆಯು ಒತ್ತಿಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.