ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಂಡೂರಿನಲ್ಲಿ ಇಂದು ಅಭ್ಯರ್ಥಿ ರಾಜ್ಯ ಎಸ್ಟಿ ಮೋರ್ಚಾ ಅಧ್ಯಕ್ಷ ಮತ್ತು ಯುವ ಮುಖಂಡ ಬಂಗಾರು ಹನುಮಂತು ಅವರ ನಾಮಪತ್ರ ಸಲ್ಲಿಕೆ ಬೃಹತ್ ಮೆರವಣಿಗೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಸಂಡೂರಿನಲ್ಲಿ ಬಿಜೆಪಿ ಯುವ ಮುಖಂಡ ಬಂಗಾರು ಹನುಮಂತು ಅವರು ಅಭ್ಯರ್ಥಿಯಾಗಿದ್ದು, ಬಿಜೆಪಿ- ಜೆಡಿಎಸ್ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಗೆಲ್ಲಿಸಲಿವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು ಹಣ ಚೆಲ್ಲಿದ್ದರಿಂದ ಬಳ್ಳಾರಿಯಲ್ಲಿ ಶ್ರೀರಾಮುಲು ಅವರಿಗೆ ಸೋಲಾಗಿತ್ತು. ಇದರ ವಿರುದ್ಧ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿದೆ. ಆಯೋಗವು ಸಂಸದ ಇ.ತುಕಾರಾಂ ಅವರ ವಿರುದ್ಧ ಕ್ರಮ ಕೈಗೊಂಡು, ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಿದೆ ಎಂದು ತಿಳಿಸಿದರು.
ಎಲ್ಲ ಶಾಸಕರು, ಮಾಜಿ ಶಾಸಕರುÀ, ವಿಧಾನಪರಿಷತ್ ಸದಸ್ಯರುÀ, ಪಕ್ಷದ ಹಿರಿಯರ ಶ್ರಮದಿಂದ ಮೊದಲ ಬಾರಿಗೆ ಬಿಜೆಪಿಯ ಕಮಲದ ಹೂ ಇಲ್ಲಿ ನಿಶ್ಚಿತವಾಗಿ ಅರಳಲಿದೆ. ನಮ್ಮೆಲ್ಲ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ಬಿಜೆಪಿ- ಜೆಡಿಎಸ್ ಶ್ರಮದಿಂದ ಗೆಲುವು ಸಾಧ್ಯವಾಗಲಿದೆ ಎಂದು ವಿಶ್ಲೇಷಿಸಿದರು.
ಕರ್ನಾಟಕದಲ್ಲಿ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದೆ. ಇದಕ್ಕೆ ತಕ್ಕ ಪಾಠ ಕಲಿಸಲು ಮತದಾರರು ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.
ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ರಾಜ್ಯ ಕಾರ್ಯದರ್ಶಿ ದಿವಾಕರ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ, ಮುಖಂಡ ಕರುಣಾಕರ ರೆಡ್ಡಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಅಭ್ಯರ್ಥಿ ಬಂಗಾರು ಹನುಮಂತು, ಪಕ್ಷದ ರಾಜ್ಯ- ಜಿಲ್ಲಾ ಪ್ರಮುಖರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.