ಪೆಟ್ರಾಪೋಲ್: ಬಾಂಗ್ಲಾದೇಶದಿಂದ ಗಡಿಯಾಚೆಗಿನ ನುಸುಳುವಿಕೆ ನಿಂತಾಗ ಮಾತ್ರ ಪಶ್ಚಿಮ ಬಂಗಾಳದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
2026 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೆರೆಯ ದೇಶದಿಂದ ಅಕ್ರಮ ವಲಸೆಯನ್ನು ತಡೆಯಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿರುವ ಪೆಟ್ರಾಪೋಲ್ ಲ್ಯಾಂಡ್ ಪೋರ್ಟ್ನಲ್ಲಿ ಹೊಸ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡ ಮತ್ತು ಕಾರ್ಗೋ ಗೇಟ್ ಉದ್ಘಾಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರದ ವಿಷಯದ ಬಗ್ಗೆ ಟಿಎಂಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು 2026 ರಲ್ಲಿ ರಾಜಕೀಯ ಬದಲಾವಣೆಯನ್ನು ತರಲು ರಾಜ್ಯದ ಜನತೆಗೆ ತಾಕೀತು ಮಾಡಿದರು.
“ಈ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವಲ್ಲಿ, ಭೂ ಬಂದರುಗಳು ಪ್ರಮುಖ ಪಾತ್ರವಹಿಸುತ್ತವೆ. ಗಡಿಯಾಚೆಗಿನ ಜನರ ಕಾನೂನು ಸಂಚಾರಕ್ಕೆ ಅವಕಾಶವಿಲ್ಲದಿದ್ದಾಗ, ಕಾನೂನುಬಾಹಿರ ಸಂಚಾರ ವಿಧಾನಗಳು ಉದ್ಭವಿಸುತ್ತವೆ, ಇದು ದೇಶದ ಶಾಂತಿಯ ಮೇಲೆ ಪರಿಣಾಮ ಬೀರುತ್ತದೆ. 2026 ರಲ್ಲಿ ಬದಲಾವಣೆಯನ್ನು ತರಲು ನಾನು ಬಂಗಾಳದ ಜನರನ್ನು ಒತ್ತಾಯಿಸುತ್ತೇನೆ ಮತ್ತು ನಾವು ಒಳನುಸುಳುವಿಕೆಯನ್ನು ನಿಲ್ಲಿಸುತ್ತೇವೆ ಮತ್ತು ಶಾಂತಿ ತರುತ್ತೇವೆ ಎಂಬ ಭರವಸೆ ನೀಡುತ್ತೇವೆ” ಎಂದು ಅವರು ಹೇಳಿದರು.
“ಒಳನುಸುಳುವಿಕೆ ನಿಂತಾಗ ಮಾತ್ರ ಬಂಗಾಳದಲ್ಲಿ ಶಾಂತಿ ನೆಲೆಸುತ್ತದೆ. ಎರಡು ದೇಶಗಳ ನಡುವಿನ ಸಂಪರ್ಕ ಮತ್ತು ಸಂಬಂಧಗಳನ್ನು ಸುಧಾರಿಸುವಲ್ಲಿ ಭೂ ಬಂದರುಗಳು ಪ್ರಮುಖ ಪಾತ್ರವಹಿಸುತ್ತವೆ. ಅವು ಎರಡು ರಾಷ್ಟ್ರಗಳ ನಡುವಿನ ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸುತ್ತವೆ” ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.