ಶ್ರೀನಗರ: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಮೂವರು ಭಯೋತ್ಪಾದಕರು ಸೇನಾ ವಾಹನದ ಮೇಲೆ ಅನೇಕ ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ. ಇದರ ಬೆನ್ನಲ್ಲೇ ಭದ್ರತಾ ಪಡೆಗಳು ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿವೆ.
ಮೂಲಗಳ ಪ್ರಕಾರ, ಅಖ್ನೂರ್ನಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿವೆ.
ಸದ್ಯ ಭದ್ರತಾ ಪಡೆಗಳು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಕಳೆದ ಕೆಲವು ದಿನಗಳಲ್ಲಿ, ಪ್ರದೇಶದಾದ್ಯಂತ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ವ್ಯಕ್ತಿಗಳು ಸಾವನ್ನಪ್ಪಿದ್ದಾರೆ.
ಜಮ್ಮು ಜಿಲ್ಲೆಯ ಅಖ್ನೂರ್ ಸೆಕ್ಟರ್ನ ಜೋಗ್ವಾನ್ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಬೆಳಗ್ಗೆ 6 ಗಂಟೆ ಸುಮಾರಿಗೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಖೌರ್ನ ಭಟ್ಟಲ್ ಪ್ರದೇಶದ ಅಸ್ಸಾನ್ ದೇವಸ್ಥಾನದ ಬಳಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರ ಉಪಸ್ಥಿತಿಯನ್ನು ಗ್ರಾಮಸ್ಥರು ವರದಿ ಮಾಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿವೆ.
ಸೇನೆಯ ಆಂಬ್ಯುಲೆನ್ಸ್ ಹಾದು ಹೋಗುತ್ತಿದ್ದಾಗ ಮುಂದಕ್ಕೆ ಗ್ರಾಮದಲ್ಲಿ ಕೆಲವು ಗುಂಡಿನ ಶಬ್ದಗಳು ಕೇಳಿಬಂದವು. ಗಡಿಯಾಚೆಯಿಂದ ನುಸುಳಿದ್ದಾರೆ ಎಂದು ನಂಬಲಾದ ಭಯೋತ್ಪಾದಕರನ್ನು ಪತ್ತೆಹಚ್ಚಲು ಮತ್ತು ತಟಸ್ಥಗೊಳಿಸಲು ಪೊಲೀಸರೊಂದಿಗೆ ಸೇನಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಸ್ಥಳಿಯರು ಹೇಳಿದ್ದಾರೆ.
ದೀಪಾವಳಿ ಹಬ್ಬದ ಸೀಸನ್ಗಾಗಿ ಈ ಪ್ರದೇಶದಲ್ಲಿ ಬಿಗಿ ಭದ್ರತೆಯ ನಡುವೆ ಭಯೋತ್ಪಾದಕ ದಾಳಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ನಂತರದ ಬೆಳವಣಿಗೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರದಾದ್ಯಂತ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಸೈನಿಕರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.
BIG NEWS : EXCLUSIVE VISUAL
Suspected terrorists fired upon vehicle of Indian Army in Jogwan area of AkhnoorFired upon Army vehicle early today morning
Joint forces have launched massive search operation in the area #Jammu #Terrorist #IndianArmy #Akhnoor #jogwan… pic.twitter.com/mYHxi9tt3T
— Indian Observer (@ag_Journalist) October 28, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.