ನವದೆಹಲಿ: ಯುವ ಆಪ್ದಾ ಮಿತ್ರ ಯೋಜನೆಯಡಿ 2 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರಿಗೆ ತರಬೇತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್, ನೆಹರು ಯುವ ಕೇಂದ್ರ ಸಂಘಟನೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ 2 ಲಕ್ಷ 37 ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ತರಬೇತಿ ಪಡೆಯಲಿದ್ದಾರೆ.
ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ 20 ನೇ ರಚನಾ ದಿನಾಚರಣೆಯ ಸಂದರ್ಭದಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದರು. ವಿಪತ್ತು ಸನ್ನದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಸಮುದಾಯ ಸ್ವಯಂಸೇವಕರಿಗೆ ತರಬೇತಿ ನೀಡುವ ಉದ್ದೇಶವನ್ನು ಈ ಯೋಜನೆ ಒಳಗೊಂಡಿದೆ.
ಯುವ ಆಪ್ದಾ ಮಿತ್ರ ಯೋಜನೆಯಡಿ ಕನಿಷ್ಠ ಶೇ 50ರಷ್ಟು ಮಹಿಳೆಯರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಮೋಹನ್ ಮಾಹಿತಿ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಯುವ ಆಪ್ದಾ ಮಿತ್ರ ಸಮಾಜದ ಮೊದಲ ಸಾಲಿನ ರಕ್ಷಕನಾಗಲು ಸಿದ್ಧವಾಗಲಿದೆ. ವಿಪತ್ತನ್ನು ಎದುರಿಸಲು ಸಮುದಾಯವನ್ನು ಸಶಕ್ತಗೊಳಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಈ ವರ್ಷದ ಜುಲೈನಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುವ ಆಪ್ದಾ ಮಿತ್ರ ಯೋಜನೆಯ ಪ್ರಸ್ತಾವನೆಯನ್ನು ಎನ್ಡಿಆರ್ಎಫ್ನಿಂದ 470 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಮೋದಿಸಿದರು, ಇದನ್ನು ದೇಶದ 315 ಅತ್ಯಂತ ವಿಪತ್ತು ಪೀಡಿತ ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುತ್ತದೆ. ಯಾವುದೇ ವಿಪತ್ತಿನ ಸಂದರ್ಭದಲ್ಲಿ ಸಮುದಾಯವನ್ನು ಮೊದಲ ಪ್ರತಿಸ್ಪಂದಕರನ್ನಾಗಿ ಸಿದ್ಧಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಗೆ ಅನುಗುಣವಾಗಿ ಈ ಯೋಜನೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.