ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು ತಿಳಿಸಿದ್ದಾರೆ.
ಎರಡನೇ ದಿನದಂದು ಅಂದರೆ ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿದ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನಾಲ್ಕು ರಾಜ್ಯಗಳ ಚುನಾವಣೆಯ ನಂತರ ನಡೆಯುತ್ತಿರುವ ಮೊದಲ ಸಂಸತ್ತು ಇದಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿಯು ಐತಿಹಾಸಿಕ ಮೂರನೇ ಅವಧಿಗೆ ಹರಿಯಾಣವನ್ನು ಉಳಿಸಿಕೊಳ್ಳುವ ಮೂಲಕ ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಂಡಿದೆ.
ಮಹಾರಾಷ್ಟ್ರ ಮತ್ತು ಜಾರ್ಖಾಂಡ್ ಚುನಾವಣೆಗೆ ಪಕ್ಷಗಳು ಸಿದ್ಧವಾಗುತ್ತಿರುವ ನಡುವೆಯೇ ಈ ಅಧಿವೇಶನ ಜರಗುತ್ತಿದೆ.
Hon’ble President, on the recommendation of Government of India, has approved the proposal for summoning of both the Houses of Parliament for the Winter Session, 2024 from 25th November to 20th December, 2024 (subject to exigencies of parliamentary business). On 26th November,… pic.twitter.com/dV69uyvle6
— Kiren Rijiju (@KirenRijiju) November 5, 2024
+
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.