ನವದೆಹಲಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.
ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಇಂದು ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು, ಈ ಯೋಜನೆಯಡಿ ಉನ್ನತ ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿಗಳು ಮೇಲಾಧಾರ ರಹಿತ ಮತ್ತು ಜಾಮೀನು ರಹಿತ ಸಾಲವನ್ನು ಪಡೆಯಲು ಅರ್ಹರಾಗಿರುತ್ತಾರೆ. ಭಾರತದ ಯಾವುದೇ ಯುವಕರು ಗುಣಮಟ್ಟದ ಉನ್ನತ ಶಿಕ್ಷಣವನ್ನು ಪಡೆಯುವುದನ್ನು ಆರ್ಥಿಕ ನಿರ್ಬಂಧಗಳು ತಡೆಯುವುದಿಲ್ಲ ಎಂಬುದನ್ನು ಖಚಿತಪಡಿಸಲು ಯೋಜನೆಯನ್ನು ಪರಿಚಯಿಸಲಾಗಿದೆ ಎಂದು ಅವರು ಹೇಳಿದರು.
ಯೋಜನೆಯ ಪ್ರಕಾರ, ವ್ಯಾಪ್ತಿಯನ್ನು ವಿಸ್ತರಿಸಲು ಬ್ಯಾಂಕುಗಳನ್ನು ಬೆಂಬಲಿಸಲು 7.5 ಲಕ್ಷದವರೆಗಿನ ಸಾಲದ ಮೊತ್ತಕ್ಕೆ ಸರ್ಕಾರವು 75 ಪ್ರತಿಶತ ಗ್ಯಾರಂಟಿ ನೀಡುತ್ತದೆ. ಎಂಟು ಲಕ್ಷ ರೂಪಾಯಿಗಳವರೆಗಿನ ಕುಟುಂಬದ ವಾರ್ಷಿಕ ಆದಾಯ ಹೊಂದಿರುವ ವಿದ್ಯಾರ್ಥಿಗಳಿಗೆ ಮೊರಟೋರಿಯಂ ಅವಧಿಯಲ್ಲಿ 10 ಲಕ್ಷ ರೂಪಾಯಿವರೆಗಿನ ಸಾಲಗಳಿಗೆ ಮೂರು ಶೇಕಡಾ ಬಡ್ಡಿ ಸಬ್ವೆನ್ಶನ್ ಅನ್ನು ಸಹ ಒದಗಿಸಲಾಗುತ್ತದೆ.
ಈ ಯೋಜನೆಯಿಂದ ಏಳು ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ಯೋಜನೆಯ ಪ್ರಯೋಜನವನ್ನು ಪಡೆಯಲು, ವಿದ್ಯಾರ್ಥಿಗಳು ಏಕೀಕೃತ ಪೋರ್ಟಲ್ PM ವಿದ್ಯಾಲಕ್ಷ್ಮಿಯಲ್ಲಿ ಶಿಕ್ಷಣ ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.