ನವದೆಹಲಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ. ಇಬ್ಬರೂ ನಾಯಕರು ವಿಶ್ವಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡಲು ಈ ವೇಳೆ ಒಪ್ಪಿಕೊಂಡಿದ್ದಾರೆ.
ಟ್ರಂಪ್ ತಮ್ಮ ವಿಜಯ ಭಾಷಣದಲ್ಲಿ ನನ್ನ ಮೊದಲ ಕೆಲಸವೆಂದರೆ ಯುದ್ಧಗಳನ್ನು ನಿಲ್ಲಿಸುವುದು ಎಂದು ಹೇಳಿದ್ದಾರೆ. ಉಕ್ರೇನ್ನಲ್ಲಿ ಯುದ್ಧವನ್ನು ಕೊನೆಗೊಳಿಸಲು ಶಾಂತಿಯುತ ಮಾತುಕತೆಗಳಿಗೆ ಕರೆ ನೀಡುವಲ್ಲಿ ಭಾರತವು ಪಶ್ಚಿಮ ಮತ್ತು ರಷ್ಯಾ ಎರಡರ ವಿಶ್ವಾಸಾರ್ಹ ಮಧ್ಯವರ್ತಿಯಾಗಿದೆ.
ಚುನಾಯಿತ ಅಧ್ಯಕ್ಷ ಟ್ರಂಪ್ ಅವರು ಮೋದಿಯೊಂದಿಗೆ ಮಾತನಾಡುತ್ತಾ, ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತದೆ ಮತ್ತು ಭಾರತವು ಭವ್ಯವಾದ ದೇಶ ಮತ್ತು ಪಿಎಂ ಮೋದಿ ಅದ್ಭುತ ವ್ಯಕ್ತಿ ಎಂದಿದ್ದಾರೆ. ಟ್ರಂಪ್ ಅವರು ಪ್ರಧಾನಿ ಮೋದಿ ಮತ್ತು ಭಾರತವನ್ನು ನಿಜವಾದ ಸ್ನೇಹಿತ ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ.
ಟ್ರಂಪ್ ಅವರ ವಿಜಯದ ನಂತರ ದೂರವಾಣಿ ಕರೆ ಮಾಡಿ ಮಾತನಾಡಿದ ಮೊದಲ ವಿಶ್ವ ನಾಯಕರಲ್ಲಿ ಪಿಎಂ ಮೋದಿ ಒಬ್ಬರು.
ಪ್ರಧಾನಿ ಮೋದಿ ಅವರು X ಪೋಸ್ಟ್ ಮಾಡಿ, “ನನ್ನ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದ್ದೇನೆ, ಅವರ ಅದ್ಭುತ ಗೆಲುವಿಗೆ ಅಭಿನಂದನೆಗಳು. ಇಂಧನ, ಬಾಹ್ಯಾಕಾಶ, ತಂತ್ರಜ್ಞಾನ, ರಕ್ಷಣೆ ಮತ್ತು ಹಲವಾರು ಇತರ ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ”ಎಂದು ಪಿಎಂ ಮೋದಿ ಹೇಳಿದ್ದಾರೆ.
Had a great conversation with my friend, President @realDonaldTrump, congratulating him on his spectacular victory. Looking forward to working closely together once again to further strengthen India-US relations across technology, defence, energy, space and several other sectors.
— Narendra Modi (@narendramodi) November 6, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.