ಬೆಂಗಳೂರು: ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಕೇಂದ್ರ ಸರಕಾರದ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಮತ್ತು ಸದಸ್ಯ- ಸಂಸದ ತೇಜಸ್ವಿ ಸೂರ್ಯ ಅವರನ್ನು ಕರ್ನಾಟಕ ವಕ್ಫ್ ಸತ್ಯಶೋಧನಾ ಸಮಿತಿ ಇಂದು ಭೇಟಿ ಮಾಡಿತು.
ಸಮಿತಿಯ ನೇತೃತ್ವ ವಹಿಸಿದ ಮಾಜಿ-ಉಪಮುಖ್ಯಮಂತ್ರಿ, ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಜಗದಾಂಬಿಕಾ ಪಾಲ್ ಅವರನ್ನು ಭೇಟಿ ಮಾಡಿ ವಕ್ಫ್ ಅನ್ಯಾಯದ ಕುರಿತು ವರದಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಮತ್ತು ಶಾಸಕರಾದ ಹರೀಶ್ ಪೂಂಜ, ಮಹೇಶ್ ಟೆÉಂಗಿನಕಾಯಿ, ಮಾಜಿ ಶಾಸಕ ಅರುಣ ಶಹಾಪುರ, ನ್ಯಾಯವಾದಿ ಎಂ.ಬಿ.ಜಿರಲಿ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರುಡಪ್ಪ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಅವರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.