ನವದೆಹಲಿ: ಭಯೋತ್ಪಾದನೆ ಮತ್ತು ಭಯೋತ್ಪಾದಕ ಪರಿಸರ ವ್ಯವಸ್ಥೆಯ ವಿರುದ್ಧ ಹೋರಾಡಲು ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ನೀತಿ ಮತ್ತು ಕಾರ್ಯತಂತ್ರವನ್ನು ಸರ್ಕಾರ ಶೀಘ್ರದಲ್ಲೇ ತರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಘೋಷಿಸಿದ್ದಾರೆ.
ನವದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಆಯೋಜಿಸಿದ್ದ ಎರಡು ದಿನಗಳ ಭಯೋತ್ಪಾದನಾ ವಿರೋಧಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಸರ್ಕಾರವು ಭಯೋತ್ಪಾದನೆ ವಿರುದ್ಧ ಬಲವಾದ ಮಾರ್ಗವನ್ನು ಅಳವಡಿಸಿಕೊಂಡಿದೆ. ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ಮೋದಿಯವರ ಕರೆಗೆ ಜಗತ್ತಿನಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ ಎಂದರು.
ಕಳೆದ ಹತ್ತು ವರ್ಷಗಳಲ್ಲಿ ಭಯೋತ್ಪಾದನೆಯ ವಿರುದ್ಧ ಹೋರಾಡಲು ದೇಶದಲ್ಲಿ ಪ್ರಬಲ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. 2006 ರಿಂದ 2013 ರ ಅವಧಿಗೆ ಹೋಲಿಸಿದರೆ 2014 ರಿಂದ 2021 ರವರೆಗೆ ಭಯೋತ್ಪಾದಕ ಘಟನೆಗಳಲ್ಲಿ ಶೇಕಡಾ 70 ರಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದರು.
ಭಯೋತ್ಪಾದಕ ದಾಳಿಗಳು ಮತ್ತು ಸಂಚು ಗಡಿಯಿಲ್ಲದ ಮತ್ತು ಅಗೋಚರ ರೀತಿಯಲ್ಲಿ ದೇಶದ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ ಶಾ ಅವರು, ಯುವ ಅಧಿಕಾರಿಗಳಿಗೆ ವಿಶೇಷ ತರಬೇತಿಯ ಅಗತ್ಯವಿದೆ. ಇತ್ತೀಚಿನ ತಂತ್ರಜ್ಞಾನಗಳೊಂದಿಗೆ ಅವರನ್ನು ಸಜ್ಜುಗೊಳಿಸಬೇಕು ಎಂದು ಹೇಳಿದರು.
ಮೂರು ಕ್ರಿಮಿನಲ್ ಕಾನೂನುಗಳು ವಿಶ್ವದಲ್ಲೇ ಅತ್ಯಂತ ಆಧುನಿಕ ಮತ್ತು ತಾಂತ್ರಿಕವಾಗಿ ಮುಂದುವರಿದವು ಎಂದ ಅವರು, ಇತ್ತೀಚಿನ ದಿನಗಳಲ್ಲಿ ಭದ್ರತೆಗೆ ಸಂಬಂಧಿಸಿದ ಹಲವಾರು ಕಾನೂನುಗಳಿಗೆ ತಿದ್ದುಪಡಿ ತರಲಾಗಿದೆ ಎಂದರು. ತಮ್ಮ ಭಾಷಣದಲ್ಲಿ, ಅವರು ಸ್ವಾತಂತ್ರ್ಯದ ನಂತರ ದೇಶದ ಆಂತರಿಕ ಭದ್ರತೆ ಮತ್ತು ಗಡಿಗಳ ಭದ್ರತೆಯನ್ನು ಕಾಪಾಡಿಕೊಳ್ಳಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ 36 ,468 ಪೊಲೀಸ್ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.