ನವದೆಹಲಿ: ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಹರಿದಾಡಿದ ತರುವಾಯ ಬಾಂಗ್ಲಾದೇಶದ ಚಿತ್ತಗಾಂಗ್ನಲ್ಲಿ ಉದ್ವಿಗ್ನತೆ ಏರ್ಪಟ್ಟಿದ್ದು, ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿಗಳನ್ನು ನಡೆಸಲಾಗುತ್ತಿದೆ. ಭಾರತವು ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಉಗ್ರವಾದಿ ಅಂಶಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ದೇಶದ ಹಿಂದೂ ಸಮುದಾಯದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಲ್ಲಿನ ಸರ್ಕಾರವನ್ನು ಒತ್ತಾಯಿಸಿದೆ.
ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ಚಿತ್ತಗಾಂಗ್ನಲ್ಲಿ ಹಿಂದೂ ಸಮುದಾಯದ ಸದಸ್ಯರ ಮೇಲೆ ನಡೆದ ಆಪಾದಿತ ದಾಳಿಯನ್ನು ಖಂಡಿಸಿದರು. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್ಗಳ ಪರಿಣಾಮವಾಗಿ ಉದ್ವಿಗ್ನತೆ ಉಂಟಾಗಿದೆ ಎಂದು ಅವರು ಹೇಳಿದರು.
“ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಡಿಯೋಗಳು ಹರಿದಾಡುತ್ತಿರುವುದನ್ನು ನಾವು ನೋಡಿದ್ದೇವೆ. ಇದು ಖಂಡನೀಯ” ಎಂದು ಜೈಸ್ವಾಲ್ ಹೇಳಿದ್ದಾರೆ.
ಅಲ್ಪಸಂಖ್ಯಾತರಿಗೆ ಭದ್ರತೆ ನೀಡುವುದು ಬಾಂಗ್ಲಾದ “ವಿಶೇಷ ಜವಾಬ್ದಾರಿ” ಎಂದಿದ್ದಾರೆ.
“ಚಿತ್ತಗಾಂಗ್ನಲ್ಲಿ, ಬೆಂಕಿ ಹಚ್ಚುವ ಪೋಸ್ಟ್ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಡಲಾಘಿದೆ. ಆ ಪ್ರಚೋದನಕಾರಿ ವಿಷಯಗಳು ಹಿಂದೂ ಸಮುದಾಯಕ್ಕೆ ಸಂಬಂಧಿಸಿವೆ. ಹೀಗಾಗಿ ಗಲಭೆ ಸಂಭವಿಸಿದೆ ಮತ್ತು ಹಿಂದೂ ಸಮುದಾಯದ ಕೆಲವು ಸದಸ್ಯರಿಗೆ ಬೆದರಿಕೆ ಹಾಕಲಾಗಿದೆ ಮತ್ತು ಅನೇಕ ಆಸ್ತಿಗಳನ್ನು ಲೂಟಿ ಮಾಡಲಾಗಿದೆ” ಎಂದು ಅವರು ಹೇಳಿದರು.
ಇದರ ಹಿಂದೆ ಉಗ್ರಗಾಮಿ ಅಂಶಗಳಿವೆ ಮತ್ತು ಇಂತಹ ವಿಷಯಗಳು ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಲು ಕಾರಣವಾಗಬಹುದು ಎಂದು ಜೈಸ್ವಾಲ್ ತಿಳಿಸಿದರು.
ಈ ಅಂಶಗಳನ್ನು ನಿಯಂತ್ರಿಸಿ ಮತ್ತು ಕ್ರಮ ಕೈಗೊಳ್ಳಬೇಕು ಮತ್ತು ಹಿಂದೂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ಅಲ್ಲಿನ ಸರ್ಕಾರಕ್ಕೆ ನಮ್ಮ ಮನವಿಯಾಗಿದೆ ಎಂದು ಅವರು ಹೇಳಿದರು.
ಅಕ್ಟೋಬರ್ 12 ರಂದು ಬಾಂಗ್ಲಾದೇಶದ ಪೂಜ್ಯ ಕಾಳಿ ದೇವಸ್ಥಾನದಲ್ಲಿ ಪೂಜಾ ಮಂಟಪ ಮತ್ತು ಕಳ್ಳತನವಾದ ಬಗ್ಗೆಯೂ ಭಾರತ ಕಳವಳ ವ್ಯಕ್ತಪಡಿಸಿ, ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರು ಮತ್ತು ಅವರ ಪೂಜಾ ಸ್ಥಳಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾವನ್ನು ಒತ್ತಾಯಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.