ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್ಫಾರ್ಮ್ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಜಾಫರ್ ಎಕ್ಸ್ಪ್ರೆಸ್ ಬೆಳಗ್ಗೆ 9 ಗಂಟೆಗೆ ಪೇಶಾವರಕ್ಕೆ ಹೊರಡಬೇಕಿತ್ತು. ಆದರೆ ಸ್ಫೋಟ ಸಂಭವಿಸಿದಾಗ ರೈಲು ಇನ್ನೂ ಪ್ಲಾಟ್ಫಾರ್ಮ್ಗೆ ಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಪೋಟದ ಸಂದರ್ಭದಲ್ಲಿ ರೈಲು ನಿಲ್ದಾಣದಲ್ಲಿ ಅಪಾರ ಸಂಖ್ಯೆಯ ಜನರು ನೆರೆದಿದ್ದ ಕಾರಣ ಸಾವುನೋವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಅಪಾಯವಿದೆ ಎಂದು ವರದಿ ತಿಳಿಸಿದೆ.
ಪ್ರತ್ಯೇಕತಾವಾದಿ ಉಗ್ರಗಾಮಿ ಗುಂಪು ದಿ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಹೇಳಿಕೆಯಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಸಿಎನ್ಎನ್ ವರದಿ ಮಾಡಿದೆ. ಸ್ಫೋಟವು ಆತ್ಮಹತ್ಯಾ ದಾಳಿ ಎಂದು ತೋರುತ್ತಿದೆ ಎಂದು ವರದಿ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.