ಮಂಗಳೂರು: ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ, ಇದಕ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ದಕ್ಷಿಣಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಾಹಿತಿ ನೀಡಿದ್ದಾರೆ.
ಮಂಗಳೂರನ್ನು ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿಲೋಮೀಟರ್ನಿಂದ 86.20 ಕಿಲೋಮೀಟರ್ ಅಂತರದವರೆಗೆ ಅಭಿವೃದ್ಧಿಯಾಗಲಿದೆ. ಈ ಮೂಲಕ ಚಾರ್ಮಾಡಿ ಘಾಟು ಪ್ರದೇಶದ ರಸ್ತೆಯು ದ್ವಿಪಥವಾಗಿಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದ ಪ್ರಮುಖ ಹೆದ್ದಾರಿಯಾಗಿರುವುದರಿಂದ ಚಾರ್ಮಾಡಿ ಘಾಟ್ ಅಗಲೀಕರಣ ಕರಾವಳಿ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ನೀಡಲಿದೆ. ಜೊತೆಗೆ ಸುಗಮ ಸರಕು ಸಾಗಣೆಯೊಂದಿಗೆ ಈ ಭಾಗದ ವ್ಯಾಪಾರ ವಹಿವಾಟು ಕೂಡ ಅಭಿವೃದ್ಧಿಯಾಗಲಿದೆ ಎಂಬ ನಿರೀಕ್ಷೆ ಇದೆ.
ಚಾರ್ಮಾಡಿ ಘಾಟ್ ಹೆದ್ದಾರಿ ದ್ವಿಪಥಗೊಳಿಸಲು 343,74,00,000 ರೂಪಾಯಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದಕ್ಕಾಗಿ ಸಂಸದರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.