ನವದೆಹಲಿ: ಮುಂದಿನ ವಾರ ನಡೆಯಲಿರುವ ಮಹಾರಾಷ್ಟ್ರ ಚುನಾವಣೆಗೆ ನಡೆಯುತ್ತಿರುವ ಪ್ರಚಾರದ ವೇಳೆ ಸುಳ್ಳನ್ನು ಹರಡುವುದರಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ಛೀಮಾರಿ ಹಾಕಬೇಕು, ಅವರನ್ನು ಖಂಡಿಸಬೇಕು ಮತ್ತು ನಿರ್ಬಂಧಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಕಳೆದ ವಾರ ಮುಂಬೈನಲ್ಲಿ ನಡೆದ ಭಾಷಣವನ್ನು ಉಲ್ಲೇಖಿಸಿ, ಮಾದರಿ ನೀತಿ ಸಂಹಿತೆಯ ಸಮಗ್ರ ಉಲ್ಲಂಘನೆಗಾಗಿ ಕಾಂಗ್ರೆಸ್ ಸಂಸದರ ವಿರುದ್ಧ ಕ್ರಮಕೈಗೊಳ್ಳಲು ಬಿಜೆಪಿ ಚುನಾವಣಾ ಸಮಿತಿಗೆ ಮನವಿ ಮಾಡಿದೆ.
ಸೋಮವಾರ ಮಧ್ಯಾಹ್ನ ಚುನಾವಣಾ ಆಯೋಗಕ್ಕೆ ಲಿಖಿತ ದೂರು ನೀಡಿರುವ ಬಿಜೆಪಿಯು, ಗಾಂಧಿಯವರು ಮಹಾರಾಷ್ಟ್ರ ರಾಜ್ಯದ ಅವಕಾಶಗಳನ್ನು ಇತರ ರಾಜ್ಯಗಳು ಕಸಿದುಕೊಳ್ಳುತ್ತಿವೆ ಎಂದು ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿದೆ
“ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಸುಳ್ಳು ಹೇಳಿದ್ದಾರೆ ಎಂದು ನಾವು ಆಯೋಗಕ್ಕೆ ತಿಳಿಸಿದ್ದೇವೆ. ಬಿಜೆಪಿಯು ಸಂವಿಧಾನವನ್ನು ಹತ್ತಿಕ್ಕಲು ಬಯಸುತ್ತದೆ ಎಂದು ಅವರು ಹೇಳುತ್ತಾ ಬರುತ್ತಿದ್ದಾರೆ” ಎಂದು ಉನ್ನತ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ ಕೇಸರಿ ಪಕ್ಷದ ನಿಯೋಗದ ನೇತೃತ್ವ ವಹಿಸಿದ್ದ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದ್ದಾರೆ.
ಆಪಲ್ನ ಐಫೋನ್ಗಳು ಮತ್ತು ಬೋಯಿಂಗ್ನ ವಿಮಾನಗಳನ್ನು ಮಹಾರಾಷ್ಟ್ರದಿಂದ ಕಿತ್ತು ಇತರ ರಾಜ್ಯಗಳಲ್ಲಿ ತಯಾರಿಸಲಾಗುತ್ತಿದೆ ಎಂಬ ಗಾಂಧಿಯವರ ಹೇಳಿಕೆ ಸಂಪೂರ್ಣವಾಗಿ ಸುಳ್ಳು. ನೋಟಿಸ್ ನೀಡಿದ ನಂತರವೂ ರಾಹುಲ್ ಗಾಂಧಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.