ನವದೆಹಲಿ: ಭಾರತವನ್ನು ಅಸ್ಥಿರಗೊಳಿಸುವ ಭಯೋತ್ಪಾದಕ ಗುಂಪು ಅಲ್-ಖೈದಾ ಸಂಚಿನ ಭಾಗವಾಗಿ ಕೆಲವು ಬಾಂಗ್ಲಾದೇಶಿ ಪ್ರಜೆಗಳು ಭಾರತದಲ್ಲಿ ದುಷ್ಕೃತ್ಯದ ಚಟುವಟಿಕೆಗಳನ್ನು ನಡೆಸುತ್ತಾ ಬರುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ದೇಶಾದ್ಯಂತ ಅನೇಕ ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ ಎಂದು ಅಧಿಕೃತ ಹೇಳಿಕೆಯೊಂದು ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ತ್ರಿಪುರಾ ಮತ್ತು ಅಸ್ಸಾಂನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ಶಂಕಿತ ವ್ಯಕ್ತಿಗಳಿಗೆ ಸಂಬಂಧಿಸಿದ ಒಂಬತ್ತು ಸ್ಥಳಗಳಲ್ಲಿ ದಾಳಿ ಮುಂಜಾನೆಯಿಂದಲೇ ಪ್ರಾರಂಭವಾಯಿತು ಎಂದು ಮೂಲಗಳು ತಿಳಿಸಿವೆ
ಈ ಶೋಧ ಕಾರ್ಯಾಚರಣೆಯ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್ಗಳು ಸೇರಿದಂತೆ ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಇತರ ಪುರಾವೆಗಳನ್ನು ತೋರಿಸುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು NIA ಹೊರಡಿಸಿದ ಹೇಳಿಕೆ ತಿಳಿಸಿದೆ.
ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸಂಗ್ರಹಿಸಿದ್ದರು ಎಂಬುದು ಎನ್ಐಎ ತನಿಖೆಯಿಂದ ತಿಳಿದುಬಂದಿದೆ.
ಭಾರತದಲ್ಲಿನ ಬಡ ಮುಸ್ಲಿಂ ಯುವಕರನ್ನು ಮೂಲಭೂತವಾದಕ್ಕೆ ದೂಡಲು ಮತ್ತು ಉಗ್ರವಾದಿಗಳಾಗಲು ಪ್ರೇರೇಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ, ಅಲ್-ಖೈದಾ ಹಿಂಸಾತ್ಮಕ ಸಿದ್ಧಾಂತವನ್ನು ಹರಡಲು ನಿಧಿಯನ್ನು ಸಂಗ್ರಹಿಸುತ್ತಿದ್ದ ಮತ್ತು ಈ ಹಣವನ್ನು ಅಲ್-ಖೈದಾಗೆ ವರ್ಗಾಯಿಸುತ್ತಿದ್ದ ಜನರ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.