ಇಂಫಾಲ: ಮಣಿಪುರದಲ್ಲಿ ಮತ್ತೆ ದಾಳಿಗಳು, ಹಿಂಸಾಚಾರಗಳು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೃತ್ಯಗಳು ನಡೆಯಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರವು ಸುಮಾರು 2,000 ಯೋಧರನ್ನು ಒಳಗೊಂಡ 20 ಹೆಚ್ಚುವರಿ ಕಂಪನಿಗಳನ್ನು ಮಣಿಪುರಕ್ಕೆ ರವಾನಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಕಂಪನಿಗಳ ಏರ್ಲಿಫ್ಟಿಂಗ್ ಮತ್ತು ತಕ್ಷಣದ ನಿಯೋಜನೆಗಾಗಿ ಗೃಹ ಸಚಿವಾಲಯ ಮಂಗಳವಾರ ರಾತ್ರಿಯೇ ಆದೇಶ ಹೊರಡಿಸಿದೆ.
ಸೋಮವಾರ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜೊತೆಗಿನ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಶಂಕಿತ ಉಗ್ರಗಾಮಿಗಳು ಹತರಾಗಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಭೀಕರ ಗುಂಡಿನ ಚಕಮಕಿಯ ನಂತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬೃಹತ್ ಸಂಗ್ರಹವನ್ನು ಪಡೆ ವಶಪಡಿಸಿಕೊಂಡಿದೆ.
ಮಣಿಪುರಕ್ಕೆ ಧಾವಿಸಲು ಆದೇಶಿಸಿದ 20 ಹೊಸ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಕಂಪನಿಗಳಲ್ಲಿ 15 ಸಿಆರ್ಪಿಎಫ್ ಮತ್ತು ಐದು ಗಡಿ ಭದ್ರತಾ ಪಡೆ (ಬಿಎಸ್ಎಫ್) ಸೇರಿವೆ ಎಂದು ಮೂಲಗಳು ತಿಳಿಸಿವೆ.
ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ಪ್ರಾರಂಭವಾದ ಜನಾಂಗೀಯ ಹಿಂಸಾಚಾರದ ನಂತರ 200 ಜನರ ಹತ್ಯೆ ನಡೆದಿದೆ. ಬಳಿಕ ಆ ರಾಜ್ಯದಲ್ಲಿ ಈಗಾಗಲೇ ಸಿಎಪಿಎಫ್ಗಳ 198 ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ. ಇದೀಗ ಮತ್ತೆ 20 ಹೆಚ್ಚುವರಿ ಕಂಪನಿಗಳ 2000 ಯೋಧರು ಅವರನ್ನು ಸೇರಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.