ಮಾಸ್ಕೋ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ, ಆದರೆ ದಿನಾಂಕ ನಿಗದಿಯಾಗಿಲ್ಲ. ಉಭಯ ದೇಶಗಳು ದಿನಾಂಕ ನಿಗದಿ ಮಾಡುತ್ತಿವೆ. ಮುಂದಿನ ವರ್ಷದ ಆರಂಭದಲ್ಲಿ ಈ ಭೇಟಿಯು ನಡೆಯಿರುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಭೇಟಿಯ ಕಾರ್ಯಸೂಚಿಯಲ್ಲಿ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಾಗಿಲ್ಲ. ರಷ್ಯಾ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು ಮಾತನಾಡಿ, “ನಾವು ಭೇಟಿಗಾಗಿ ಎದುರು ನೋಡುತ್ತಿದ್ದೇವೆ. ದಿನಾಂಕಗಳನ್ನು ಶೀಘ್ರದಲ್ಲೇ ಪರಸ್ಪರ ನಿಗದಿ ಮಾಡಲಾಗುವುದು” ಎಂದು ಹೇಳಿದರು.
ಅಧ್ಯಕ್ಷ ಪುಟಿನ್ ಅವರು ತಮ್ಮ ಪ್ರವಾಸದ ವೇಳೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಅಕ್ಟೋಬರ್ ಅಂತ್ಯದಲ್ಲಿ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ಮೋದಿ ರಷ್ಯಾದ ಕಜಾನ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ನಾಯಕರು ಕೊನೆಯ ಬಾರಿ ಭೇಟಿಯಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು ಅಧ್ಯಕ್ಷ ಪುಟಿನ್ ಅವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು.
ತಮ್ಮ ಕೊನೆಯ ಸಭೆಯಲ್ಲಿ ಪ್ರಧಾನಿ ಮೋದಿ ಅವರು ರಷ್ಯಾ-ಉಕ್ರೇನ್ ಸಮಸ್ಯೆಯನ್ನು ಉಲ್ಲೇಖಿಸಿ ಸಂಘರ್ಷಗಳಿಗೆ ಶಾಂತಿಯುತ ಪರಿಹಾರಗಳನ್ನು ಭಾರತ ನಂಬುತ್ತದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ತಿಳಿಸಿದ್ದರು. “ನಾವು ರಷ್ಯಾ-ಉಕ್ರೇನ್ ಸಮಸ್ಯೆಯಲ್ಲಿ ಎಲ್ಲಾ ಕಡೆಯಲ್ಲೂ ಸಂಪರ್ಕದಲ್ಲಿದ್ದೇವೆ. ಎಲ್ಲಾ ಸಂಘರ್ಷಗಳನ್ನು ಮಾತುಕತೆಯಿಂದ ಪರಿಹರಿಸಬಹುದು ಎಂಬುದು ನಮ್ಮ ನಿಲುವು. ಸಂಘರ್ಷಗಳಿಗೆ ಶಾಂತಿಯುತ ಪರಿಹಾರಗಳು ಇರಬೇಕು ಎಂದು ನಾವು ನಂಬುತ್ತೇವೆ. ಶಾಂತಿಯನ್ನು ತರಲು ಸಹಾಯ ಮಾಡಲು ಭಾರತ ಯಾವಾಗಲೂ ಸಿದ್ಧವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.