ನವದೆಹಲಿ: ಹಿಮಾಚಲ ಪ್ರದೇಶ ಆರ್ಥಿಕತೆಯನ್ನು ನಿಭಾಯಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸರ್ಕಾರವು 150 ಕೋಟಿ ರೂಪಾಯಿಗಳ ವಿದ್ಯುತ್ ಬಾಕಿಯನ್ನು ಪಾವತಿಸಲು ವಿಫಲವಾದ ಕಾರಣ ದೆಹಲಿಯ ಹಿಮಾಚಲ ಭವನವನ್ನು ಹರಾಜು ಮಾಡುವಂತೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಆರೋಪ ತೀವ್ರಗೊಂಡಿದೆ.
ಬಿಜೆಪಿ ನಾಯಕ ಶೆಹಜಾದ್ ಪೂನವಾಲಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಕಾಂಗ್ರೆಸ್ ಈಗ ಸರ್ಕಾರಿ ಕಟ್ಟಡಗಳನ್ನು ಹರಾಜು ಮಾಡುವಷ್ಟು ಕೆಳಮಟ್ಟಕ್ಕೆ ಇಳಿದಿದೆ. ಕ್ರೆಡಿಟ್ ರಾಹುಲ್ ಗಾಂಧಿಯವರ ಖಟಾಖಟ್ ಅರ್ಥಶಾಸ್ತ್ರಕ್ಕೆ ಸಲ್ಲುತ್ತದೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಎಲ್ಲಾ ರೀತಿಯ ಭರವಸೆಗಳನ್ನು ನೀಡಿತ್ತು, ಆದರೆ ಇದರ ಪರಿಣಾಮವಾಗಿ ರಾಜ್ಯ ಸರ್ಕಾರದ ಬಳಿ ಈಗ ಸಂಬಳ ಮತ್ತು ಪಿಂಚಣಿ ನೀಡಲು ಹಣವಿಲ್ಲ. ಈಗ ಅವರ ಬಳಿ ಹಣವಿಲ್ಲದ ಕಾರಣ ಹಿಮಾಚಲ ಭವನದ 150 ಕೋಟಿ ರೂ.ಗಳ ವಿದ್ಯುತ್ ಬಿಲ್ ಪಾವತಿಸಲು ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಯಾವುದೂ ಸುರಕ್ಷಿತವಾಗಿಲ್ಲ” ಎಂದಿದ್ದಾರೆ.
ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸರ್ಕಾರವು ಸರಿಸುಮಾರು 150 ಕೋಟಿ ರೂಪಾಯಿಗಳ ವಿದ್ಯುತ್ ಬಾಕಿಯನ್ನು ಪಾವತಿಸಲು ವಿಫಲವಾದ ನಂತರ ಹಿಮಾಚಲ ಪ್ರದೇಶ ಹೈಕೋರ್ಟ್ ಸೋಮವಾರ ದೆಹಲಿಯ ರಾಜ್ಯ ಭವನವನ್ನು ಮಾರಾಟ ಮಾಡಲು ಅನುಮತಿ ನೀಡಿದೆ.
ಈ ಬಗ್ಗೆ ಸತ್ಯಶೋಧನಾ ತನಿಖೆ ನಡೆಸುವಂತೆ ವಿದ್ಯುತ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಲಯ ಆದೇಶಿಸಿದ್ದು, ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳನ್ನು ಗುರುತಿಸಲು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.