ಟೊರೆಂಟೋ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸಂಚು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿದಿತ್ತು ಎಂಬ ಮಾಧ್ಯಮ ವರದಿಯನ್ನು ಕೆನಡಾ ಸರ್ಕಾರ ಶುಕ್ರವಾರ ತಳ್ಳಿಹಾಕಿದೆ.
ಭಾರತವು ಗುರುವಾರ ಕೆನಡಾದ ಮಾಧ್ಯಮ ವರದಿಯನ್ನು ಬಲವಾಗಿ ತಿರಸ್ಕರಿಸಿದ ಒಂದು ದಿನದ ನಂತರ ಇದು ಕೆನಡಾದಿಂದ ಹೇಳಿಕೆ ಹೊರಬಿದ್ದಿದೆ.
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಅವರು ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಅನ್ನು ಹತ್ಯೆ ಮಾಡುವ ಯೋಜನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೆಸರಿಸದ ಕೆನಡಾದ ಅಧಿಕಾರಿಗಳನ್ನು ಉಲ್ಲೇಖಿಸಿ ಕೆನಡಾದ ಗ್ಲೋಬ್ ಆಂಡ್ ಮೇಲ್ ಪತ್ರಿಕೆ ವರದಿ ಮಾಡಿತ್ತು.
ಈ ಬಗ್ಗೆ ಶುಕ್ರವಾರ ಹೇಳಿಕೆ ನೀಡಿರುವ ಕೆನಡಾದ ರಾಷ್ಟ್ರೀಯ ಭದ್ರತೆ ಮತ್ತು ಗುಪ್ತಚರ ಸಲಹೆಗಾರರಾದ ನಥಾಲಿ ಜಿ ಡ್ರೂಯಿನ್, ಹೆಸರಿಸದ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮ ಸಂಸ್ಥೆ ಮಾಡಿದ ವರದಿಗಳಿಗೆ ಯಾವುದೇ ಪುರಾವೆಗಳು ಇಲ್ಲ ಎಂದು ಹೇಳಿದ್ದಾರೆ.
“ಕೆನಡಾದೊಳಗಿನ ಗಂಭೀರ ಅಪರಾಧ ಚಟುವಟಿಕೆಗಳನ್ನು ಪ್ರಧಾನಿ ಮೋದಿ, ಸಚಿವ ಜೈಶಂಕರ್ ಅಥವಾ ಎನ್ಎಸ್ಎ ದೋವಲ್ಗೆ ಸಂಬಂಧ ಕಲ್ಪಿಸುವ ಪುರಾವೆಗಳ ಬಗ್ಗೆ ಮನಗೆ ತಿಳಿದಿಲ್ಲ” ಎಂದು ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ
ಗ್ಲೋಬ್ ಅಂಡ್ ಮೇಲ್ ವರದಿಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ “ಕೆಟ್ಟ ಅಭಿಯಾನ” ಎಂದು ಕರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.