ಶ್ರೀನಗರ: ದೇಶದ ಸಂವಿಧಾನವನ್ನು ಸಂಸತ್ತು ಅಂಗೀಕರಿಸಿದ 1950 ರ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರವು ಇಂದು ‘ಸಂವಿಧಾನ್ ದಿವಸ್’ ಅನ್ನು ಆಚರಿಸುತ್ತಿದೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ ದಿನಾಚರಣೆಯ ನೇತೃತ್ವ ವಹಿಸಿದ್ದಾರೆ. ಮುಖ್ಯ ಕಾರ್ಯಕ್ರಮವು ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ (SKICC) ನಲ್ಲಿ ಸಂವಿಧಾನದ ಪೀಠಿಕೆ ಓದುವ ಸಮಾರಂಭವದೊಂದಿಗೆ ಆರಂಭವಾಯಿತು.
ಇದೇ ರೀತಿಯ ಸಮಾರಂಭಗಳನ್ನು ಜಮ್ಮು ಮತ್ತು ಕಾಶ್ಮೀರದಾದ್ಯಂತ ಸರ್ಕಾರಿ ಕಚೇರಿಗಳು, ಪಿಎಸ್ಯುಗಳು, ಶಿಕ್ಷಣ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಾಗುತ್ತಿದೆ.
ಜಮ್ಮು-ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಮುನ್ನುಡಿಯನ್ನು ಓದಲು ಆದೇಶಿಸಿತ್ತು.
“ನವೆಂಬರ್ 26 ಅನ್ನು ಸಂವಿಧಾನದ ದಿನವನ್ನಾಗಿ ಆಚರಿಸಲಾಗುತ್ತದೆ. ಉಚ್ಚ ನ್ಯಾಯಾಲಯದ ಪ್ರತಿ ವಿಭಾಗದಲ್ಲಿ ಲಭ್ಯವಿರುವ ಹಿರಿಯ ಗೌರವಾನ್ವಿತ ನ್ಯಾಯಾಧೀಶರು ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಕಾರ್ಯಕ್ರಮವನ್ನು ಮುನ್ನಡೆಸುತ್ತಾರೆ. ಆಯಾ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಮತ್ತು ತಾಲೂಕಾ ನ್ಯಾಯಾಲಯದಲ್ಲಿ ಹಿರಿಯ ನ್ಯಾಯಾಂಗ ಅಧಿಕಾರಿ ಕಾರ್ಯಕ್ರಮ ನಡೆಸುತ್ತಾರೆ” ಎಂದು ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಶಹಜಾದ್ ಅಜೀಂ ಹೇಳಿದರು.
“ಸಂವಿಧಾನದ 75 ವರ್ಷಗಳ ಅಂಗೀಕಾರದ ಮಹತ್ವವನ್ನು ಪರಿಗಣಿಸಿ, ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲ ಮೌಲ್ಯಗಳನ್ನು ಪುನರುಚ್ಚರಿಸಲು ಮತ್ತು ಅಭಿಯಾನದಲ್ಲಿ ತಮ್ಮ ಸರಿಯಾದ ಪಾತ್ರವನ್ನು ವಹಿಸಲು ನಾಗರಿಕರನ್ನು ಪ್ರೇರೇಪಿಸಲು ಈ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತಿದೆ. ಈ ವರ್ಷ ‘ಹಮಾರಾ ಸಂವಿಧಾನ್, ಹಮಾರಾ ಸ್ವಾಭಿಮಾನ್’ ಥೀಮ್ ಅಡಿ ಆಚರಿಸಲಾಗುತ್ತಿರುವ 75 ವರ್ಷಗಳ ಸಂವಿಧಾಣ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ” ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.