ನವದೆಹಲಿ: ಯಾವುದೇ ಪ್ರಮುಖ ಭಯೋತ್ಪಾದಕ ದಾಳಿಯನ್ನು ಎದುರಿಸುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯವು ಜಮ್ಮು ನಗರದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿಗಳ (NSG) ಶಾಶ್ವತ ಕೇಂದ್ರವನ್ನು ರಚಿಸಿದೆ.
ಭಯೋತ್ಪಾದಕರನ್ನು ಎದುರಿಸುವಂತಹ ಪರಿಸ್ಥಿತಿ ಉದ್ಭವಿಸಿದರೆ ಕೆಲವೇ ನಿಮಿಷಗಳಲ್ಲಿ ಕಾರ್ಯನಿರ್ವಹಿಸಿ ಅದನ್ನು ಹತ್ತಿಕ್ಕಲು ಎನ್ಎಸ್ಜಿಯ ವಿಶೇಷ ಘಟಕವು ಈಗ ಜಮ್ಮು ನಗರದಲ್ಲಿ ಶಾಶ್ವತವಾಗಿ ನೆಲೆಯೂರಿದೆ ಎಂದು ವರದಿಗಳು ತಿಳಿಸಿವೆ.
ಭದ್ರತಾ ಪಡೆಗಳ ಮೇಲೆ ಜಮ್ಮು ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಭಯೋತ್ಪಾದಕ ದಾಳಿಗಳು ನಡೆಯಬಹುದು ಮತ್ತು ಭಯೋತ್ಪಾದಕರು ಜಮ್ಮುವನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಬಹುದು ಎಂಬ ವರದಿಗಳ ಹಿನ್ನೆಲೆಯಲ್ಲಿ ಎನ್ಎಸ್ಜಿ ಹಬ್ ಅನ್ನು ಇಲ್ಲಿ ರಚಿಸಲಾಗಿದೆ.
ಎನ್ಎಸ್ಜಿ ಕಮಾಂಡೋಗಳ ನಿಯೋಜನೆಯು ವಿಶೇಷವಾಗಿ ಬಹುಮಹಡಿ ಕಟ್ಟಡಗಳು, ಭದ್ರತಾ ಸ್ಥಾಪನೆಗಳು ಮತ್ತು ಇತರ ಸೂಕ್ಷ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಭಯೋತ್ಪಾದಕ ದಾಳಿಗಳು ನಡೆದರೆ ಅದನ್ನು ಕಾಪಾಡಲು ಜಮ್ಮು-ಕಾಶ್ಮೀರ ಪೊಲೀಸರು ರೂಪಿಸಿದ ಭಯೋತ್ಪಾದನಾ-ವಿರೋಧಿ ಯೋಜನೆಯ ಭಾಗವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.