ಬೆಳಗಾವಿ: ಬೆಳಗಾವಿ ಜಿಲ್ಲೆಯ ಪ್ರಸಿದ್ಧ ಸವದತ್ತಿ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ನೂರು ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ. ಇದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಬೆಂಗಳೂರಿನ ತಾತಗುಣಿ ಎಸ್ಟೇಟ್ ಅಭಿವೃದ್ಧಿಗೆ ರೂ. 99.17 ಕೋಟಿ ಅನುದಾನವನ್ನೂ ನೀಡಿದೆ.
ಈ ಕುರಿತು ಬೆಳಗಾವಿ ಬಿಜೆಪಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಮಾಹಿತಿ ನೀಡಿದ್ದು, ಬೆಳಗಾವಿ ಜಿಲ್ಲೆಯ ಸುಪ್ರಸಿದ್ಧ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು 100 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಿದೆ ಎಂದರು.
“ಈ ಅನುದಾನವನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆ ಬಿಡುಗಡೆಗೊಳಿಸಿದೆ. ಈಗಾಗಲೇ ಪ್ರಸ್ತಾಪಸಲಾದ ಯೋಜನೆಯ ಅನುಮೋದನೆಯ ಕುರಿತು ಹಿಂದಿನ ತಿಂಗಳಷ್ಟೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮನವಿ ಮಾಡಿಕೊಳ್ಳಲಾಗಿತ್ತು. ಸವದತ್ತಿಗೆ ಮೂಲ ಸೌಲಭ್ಯಗಳ ಅಗತ್ಯತೆ ಸವದತ್ತಿಯ ಶ್ರೀ ರಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮಹತ್ವತೆಯ ಕುರಿತು ಹಾಗೂ ಇಲ್ಲಿ ಬರುವ ಭಕ್ತಾಧಿಗಳ ಅನುಕೂಲಕ್ಕೆ ಮೂಲಭೂತ ಸೌಕರ್ಯದ ಅವಶ್ಯಕತೆಯ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಲಾಗಿತ್ತು. ಇಲ್ಲಿನ ಅಭಿವೃದ್ಧಿ ಕುರಿತು ತಿಳಿಸಿದ್ದೇವು. ಅಂದು ಕೇಂದ್ರ ಸಚಿವರ ಮುಂದೆ ಅಭಿವೃದ್ಧಿ ಯೋಜನೆಯ ಒಪ್ಪಿಗೆ ನೀಡುವಂತೆ ಕೋರಿದ್ದೇವು” ಎಂದು ಹೇಳಿದ್ದಾರೆ.
ನಮ್ಮ ಬೇಡಿಕೆಗೆ ಸ್ಪಂದಿಸಿ ಅದರಂತೆ ಅಭಿವೃದ್ಧಿಗೆ ಒಪ್ಪಿಗೆ ನೀಡಿ ಅನುದಾನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ಅರ್ಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.