ಕಠ್ಮಂಡು: ನೇಪಾಳ ಪ್ರಧಾನಿ ಸುಶೀಲ್ ಕೊಯಿರಾಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ.ನಾಳೆ ಪ್ರಧಾನಿ ಹುದ್ದೆಗೆ ಚುನಾವಣೆ ನಡೆಯಲಿರುವ ಮುಂಗಡವಾಗಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಭಾನುವಾರ ಅಲ್ಲಿನ ಸಂಸತ್ತಿನಲ್ಲಿ ಮತದಾನದ ಮೂಲಕ ನೂತನ ಪ್ರಧಾನಿಯ ಆಯ್ಕೆ ನಡೆಯಲಿದೆ. ಈ ಚುನಾವಣೆಯಲ್ಲಿ ಸುಶೀಲಾ ಅವರೂ ಕಣದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊಯಿರಾಲ ಅವರು ರಾಷ್ಟ್ರಪತಿ ರಾಮ್ ಬರನ್ ಯಾದವ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಅದನ್ನು ಅವರು ಅಂಗೀಕಾರ ಮಾಡಿದ್ದಾರೆ. ನೂತನ ಸರ್ಕಾರ ರಚನೆಯಾಗುವವರೆಗೂ ಆಡಳಿತವನ್ನು ಯಾದವ್ ನೋಡಿಕೊಳ್ಳಲಿದ್ದಾರೆ.
ಇನ್ನೊಂದೆಡೆ ನೂತನ ಸಂವಿಧಾನಕ್ಕೆ ಸಂಬಂಧಿಸಿದಂತೆ ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆ, ಘರ್ಷಣೆಗಳನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದ ಕೊಯಿರಾಲ ಸರಕಾರದ ವಿರುದ್ಧ ಸಾಕಷ್ಟು ಟೀಕೆಗಳೂ ಕೇಳಿ ಬರುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.