ನವದೆಹಲಿ: ಸಂಸತ್ತಿನ ಗ್ರಂಥಾಲಯ ಕಟ್ಟಡದ ಬಾಲಯೋಗಿ ಆಡಿಟೋರಿಯಂನಲ್ಲಿ ಆಡಳಿತಾರೂಢ ಮೈತ್ರಿಕೂಟದ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ‘ದಿ ಸಬರಮತಿ ರಿಪೋರ್ಟ್’ ಚಲನಚಿತ್ರವನ್ನು ವೀಕ್ಷಿಸಿದರು. ಹಿರಿಯ ನಟ ಜೀತೇಂದ್ರ ಮತ್ತು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿರುವ ರಾಶಿ ಖನ್ನಾ ಅವರೂ ಈ ಸಂದರ್ಭದಲ್ಲಿದ್ದರು. ಪ್ರಧಾನಿಯಾದ ನಂತರ ಮೋದಿ ವೀಕ್ಷಿಸಿದ ಮೊದಲ ಚಲನಚಿತ್ರ ಇದಾಗಿದೆ.
ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ ಮತ್ತು ಬಿಜೆಪಿ ಮಿತ್ರಪಕ್ಷ ಜಿತನ್ ರಾಮ್ ಮಾಂಝಿ ಸೇರಿದಂತೆ ಇತರರು ಸಿನಿಮಾ ವೀಕ್ಷಿಸಿದರು.
ಫೆಬ್ರವರಿ 27, 2002 ರಂದು ಗೋಧ್ರಾದಲ್ಲಿ ಸಾಬರಮತಿ ಎಕ್ಸ್ಪ್ರೆಸ್ನಲ್ಲಿ ನಡೆದ ಬೆಂಕಿ ಘಟನೆಯ ಹಿಂದಿನ ಸತ್ಯವನ್ನು ಈ ಸಿನಿಮಾ ಬಹಿರಂಗಪಡಿಸಿದೆ , ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿ ಅಯೋಧ್ಯೆಯಿಂದ ಹಿಂದಿರುಗುತ್ತಿದ್ದ 59 ಭಕ್ತರು ಈ ಘಟನೆಯಲ್ಲಿ ಸಾವನ್ನಪ್ಪಿದ್ದರು.
ಪ್ರಧಾನ ಪಾತ್ರದಲ್ಲಿ ನಟಿಸಿರುವ ವಿಕ್ರಾಂತ್ ಮಾಸ್ಸೆ, ಪ್ರಧಾನಿ ಮೋದಿಯವರೊಂದಿಗೆ ಸಿನಿಮಾ ನೋಡಿದ್ದು ಪದಗಳಲ್ಲಿ ವಿವರಿಸಲಾಗದ ವಿಭಿನ್ನ ಅನುಭವ ಎಂದು ಹೇಳಿದ್ದಾರೆ. ಈ ಅನುಭವ ವೃತ್ತಿಜೀವನದಲ್ಲಿ ಅತ್ಯುನ್ನತ ಹಂತವಾಗಿದೆ ಎಂದು ಅವರು ಹೇಳಿದರು.
ಚಿತ್ರವನ್ನು ವೀಕ್ಷಿಸಿದ ನಂತರ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ, ಪಿಎಂ ಮೋದಿ ಅವರು ಚಿತ್ರದ ನಿರ್ಮಾಪಕರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.
Joined fellow NDA MPs at a screening of 'The Sabarmati Report.'
I commend the makers of the film for their effort. pic.twitter.com/uKGLpGFDMA
— Narendra Modi (@narendramodi) December 2, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.