ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಚುನಾವಣಾ ಬಾಂಡ್ ಮೂಲಕ ನೂರಾರು ಕೋಟಿ ರೂ.ಗಳ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ಕಟೀಲ್ ಸೇರಿದಂತೆ ಹಲವು ಬಿಜೆಪಿ ಮುಖಂಡರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಎನ್ನುವರು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಖಾಸಗಿ ದೂರು ನೀಡಿದ್ದರು.
ಈ ಪ್ರಕರಣದಲ್ಲಿ 1ನೇ ಆರೋಪಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, 2ನೇ ಆರೋಪಿಯಾಗಿ ಇಡಿ ಅಧಿಕಾರಿಗಳು, 3ನೇ ಆರೋಪಿಯಾಗಿ ಬಿಜೆಪಿ ಘಟಕದ ಪದಾಧಿಕಾರಿಗಳು, 4ನೇ ಆರೋಪಿಗಳಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೆಂದ್ರ ಮತ್ತಿತರರನ್ನು ಹೆಸರಿಸಲಾಗಿತ್ತು.
ಈ ದೂರನ್ನು ರದ್ದುಪಡಿಸಿವಂತೆ ನಳಿನ್ ಕುಮಾರ್ ಕಟೀಲ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಬಿಜೆಪಿ ನಾಯಕರ ಪರವಾಗಿ ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದ್ದರು. ಆದರ್ಶ್ ಅಯ್ಯರ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಶಾಸಕರು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಬಲವಂತದ ಕ್ರಮಕೈಗೊಳ್ಳದಂತೆ ಆದೇಶ ಹೊರಡಿಸಿ ಡಿ. 3 ಕ್ಕೆ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಎಫ್ಐಆರ್ ರದ್ದುಪಡಿಸಿ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.