ಮುಂಬಯಿ: ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದು ಫಡ್ನವೀಸ್ ಅವರ ಮೂರನೇ ಅವಧಿಗೆ ಮಹಾರಾಷ್ಟ್ರ ಸಿಎಂ ಆಗಲಿದ್ದಾರೆ ಎಂಬ ಘೋಷಣೆ ಹೊರಬಿದ್ದಿದೆ.
ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಮುಂಬೈನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಹೆಸರನ್ನು ಅಂತಿಮಗೊಳಿಸಲಾಗಿದೆ. ಅವರು ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಮುಂಬೈನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಿಜೆಪಿಯ ಕೇಂದ್ರ ವೀಕ್ಷಕರಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ನವೆಂಬರ್ 20 ರಂದು ಮಹಾರಾಷ್ಟ್ರದಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆದವು ಮತ್ತು ನವೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಮಹಾಯುತಿಯು 230 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿಯ 132 ಸ್ಥಾನಗಳನ್ನು, ಶಿಂಧೆ ನೇತೃತ್ವದ ಶಿವಸೇನೆ 57 ಸ್ಥಾನಗಳನ್ನು, ಅಜಿತ್ ಪವಾರ್ ಅವರ ಎನ್ಸಿಪಿ 41 ಸ್ಥಾನಗಳನ್ನು ಗೆದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.