ನವದೆಹಲಿ: ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಎಡಪಂಥೀಯ ಉಗ್ರವಾದದ ಭೀತಿಯಿಂದ 60 ಜಿಲ್ಲೆಗಳನ್ನು ಮುಕ್ತಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
ಇಂದು ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಈ ಮಾಹಿತಿಯನ್ನು ನೀಡಿದ್ದು, ಎಡಪಂಥೀಯ ಉಗ್ರವಾದವನ್ನು ನಿರ್ಮೂಲನಗೊಳಿಸಲು ರಾಷ್ಟ್ರೀಯ ನೀತಿ ಮತ್ತು ಕ್ರಿಯಾ ಯೋಜನೆಯ ದೃಢವಾದ ಅನುಷ್ಠಾನದ ನಂತರ ಹಿಂಸಾಚಾರ ಕಡಿಮೆಯಾಗಿದೆ ಮತ್ತು ನಕ್ಸಲರ ಭೌಗೋಳಿಕ ಹರಡುವಿಕೆ ಕೂಡ ಕಡಿಮೆಯಾಗಿದೆ ಎಂದು ಹೇಳಿದರು.
ಎಡಪಂಥೀಯ ಉಗ್ರವಾದ ಸಂಬಂಧಿತ ಹಿಂಸಾತ್ಮಕ ಘಟನೆಗಳ ಸಂಖ್ಯೆ 2010 ಕ್ಕೆ ಹೋಲಿಸಿದರೆ ಪ್ರಸ್ತುತ 73 ಪ್ರತಿಶತದಷ್ಟು ಕಡಿಮೆಯಾಗಿದೆ ಎಂದು ಸಚಿವರು ಹೇಳಿದರು. 2023 ರಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಸಾವಿನ ಸಂಖ್ಯೆ 138 ಕ್ಕೆ ಇಳಿದಿದೆ ಮತ್ತು ಪೀಡಿತ ಜಿಲ್ಲೆಗಳ ಸಂಖ್ಯೆ ಏಪ್ರಿಲ್ 2024 ರಲ್ಲಿ 38 ಕ್ಕೆ ಇಳಿಸಲಾಗಿದೆ. ಕಳೆದ ಐದು ವರ್ಷಗಳಲ್ಲಿ 4350 ಕೋಟಿ ರೂಪಾಯಿಗಳನ್ನು ಸಾಮರ್ಥ್ಯ ನಿರ್ಮಾಣಕ್ಕಾಗಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.