ನವದೆಹಲಿ: ದೂರದೃಷ್ಟಿಯ ನಾಯಕ ಡಾ. ಭೀಮ್ ರಾವ್ ಅಂಬೇಡ್ಕರ್ ಅವರ ಮೌಲ್ಯಗಳು ಮತ್ತು ನೈತಿಕತೆಯನ್ನು ರಕ್ಷಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಮತ್ತು ಹಿಂದುಳಿದವರ ಯೋಗಕ್ಷೇಮಕ್ಕಾಗಿ ದೃಢ ಹೆಜ್ಜೆ ತೆಗೆದುಕೊಂಡಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಪ್ರತಿಪಾದಿಸಿದರು.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೇಘವಾಲ್, 2017 ರಲ್ಲಿ ನವದೆಹಲಿಯಲ್ಲಿ ಡಾ ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರವನ್ನು ಸ್ಥಾಪಿಸುವಂತಹ ಯೋಜನೆಗಳು ಮತ್ತು ಉಪಕ್ರಮಗಳ ಅನುಷ್ಠಾನಗೊಳಿಸುವ ಮೂಲಕ ಸರ್ಕಾರವು ಅಂಬೇಡ್ಕರ್ ಅವರ ಕೊಡುಗೆ ಮತ್ತು ಆದರ್ಶಗಳನ್ನು ಜಗತ್ತಿಗೆ ಪ್ರದರ್ಶಿಸುತ್ತಿದೆ ಎಂದರು.
ಅಂಬೇಡ್ಕರ್ ಅವರು ಕೇವಲ ಸಾಮಾಜಿಕ ಸಬಲೀಕರಣದ ನಾಯಕರಲ್ಲ, ಭಾರತದ ಆರ್ಥಿಕ ವ್ಯವಸ್ಥೆಗೆ ಅಡಿಪಾಯ ಹಾಕಿದರು. ಬಿ ಆರ್ ಅಂಬೇಡ್ಕರ್ ಅವರ ವರದಿಗಳು ಹಣಕಾಸು ಆಯೋಗವನ್ನು ಸ್ಥಾಪಿಸಲು ಸಹಾಯ ಮಾಡಿದೆ. ಅವರ ಪುಸ್ತಕ “The Problem of the Rupee: Its Origin and Its Solution” ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸಲು ಸಹಾಯ ಮಾಡಿದೆ ಎಂದರು.
ಹಿಂದಿನ ಕಾಂಗ್ರೆಸ್ ಆಡಳಿತವನ್ನು ಟೀಕಿಸಿದ ಅವರು, ಕಾಂಗ್ರೆಸ್ ಯುಗದಲ್ಲಿ ಮಹಾನ್ ನಾಯಕ ಅಂಬೇಡ್ಕರ್ ಅವರ ಕೊಡುಗೆಗಳನ್ನು ಪುರಸ್ಕರಿಸಲಾಗಲಿಲ್ಲ ಎಂದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.