ಮುಂಬೈ: ನಾಲ್ಕು ತಿಂಗಳ ಹಿಂದೆ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ನಂತರ ಮೊದಲ ಸಾರ್ವಜನಿಕ ಭಾಷಣ ಮಾಡಿರುವ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು, ಬಾಂಗ್ಲಾ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯೂನಸ್ ಅವರು ಜನಾಂಗೀಯ ಹತ್ಯೆಯನ್ನು ರೂಪಿಸುತ್ತಿದ್ದಾರೆ ಮತ್ತು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಬಾಂಗ್ಲಾದೇಶದ “ಬಿಜೋಯ್ ಡಿಬೋಸ್” (ವಿಕ್ಟರಿ ಡೇ) ಅನ್ನು ಗುರುತಿಸಲು ನ್ಯೂಯಾರ್ಕ್ನಲ್ಲಿ ನಡೆದ ಸಮಾರಂಭದಲ್ಲಿ ವರ್ಚುವಲ್ ಆಗಿ ಮಾತನಾಡಿದ ಹಸೀನಾ, ಪ್ರಸ್ತುತ ಆಡಳಿತವು ಪೂಜಾ ಸ್ಥಳಗಳ ಮೇಲೆ ದಾಳಿಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ದುರ್ಬಲ ಸಮುದಾಯಗಳ ದುಃಸ್ಥಿತಿಯನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ತಮ್ಮ ಅವಾಮಿ ಲೀಗ್ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಹಸೀನಾ, ಯೂನಸ್ ಅಧಿಕಾರದ ದಾಹ ಹೊಂದಿದ್ದಾರೆ ಎಂದು ಆರೋಪಿಸಿದರು. 1975 ರಲ್ಲಿ ನಮ್ಮ ತಂದೆ ಶೇಖ್ ಮುಜಿಬುರ್ ರೆಹಮಾನ್ ಅವರನ್ನು ಕೊಂದಂತೆಯೇ ನನ್ನ ಮತ್ತು ನನ್ನ ಸಹೋದರಿ ಶೇಖ್ ರೆಹಾನಾ ಅವರನ್ನು ಹತ್ಯೆ ಮಾಡಲು ಸಂಚುಗಳು ನಡೆದಿವೆ ಎಂದು ಹೇಳಿದರು.
“ಇಂದು, ನನ್ನ ಮೇಲೆ ನರಮೇಧದ ಆರೋಪವಿದೆ, ಆದರೆ ಯೂನಸ್ ಮತ್ತು ಅವನ ಸಹಚರರು ಈ ಹಿಂಸಾಚಾರವನ್ನು ನಿಖರವಾಗಿ ಸಂಘಟಿಸಿದ್ದಾರೆ” ಎಂದು ಅವರು ಬಂಗಾಳಿ ಭಾಷೆಯಲ್ಲಿ ಮಾತನಾಡುತ್ತಾ ಹೇಳಿದರು.
ಹಸೀನಾ ಅವರ ಸುಮಾರು ಒಂದು ಗಂಟೆ ಅವಧಿಯ ಭಾಷಣವು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಹದಗೆಟ್ಟ ಪರಿಸ್ಥಿತಿಯನ್ನು ವಿವರಿಸಿದೆ. ಹಿಂದೂಗಳು, ಬೌದ್ಧರು ಮತ್ತು ಕ್ರಿಶ್ಚಿಯನ್ನರು ನಿರಂತರ ಕಿರುಕುಳವನ್ನು ಎದುರಿಸುತ್ತಿದ್ದಾರೆ, 11 ಚರ್ಚ್ಗಳನ್ನು ಧ್ವಂಸಗೊಳಿಸಲಾಗಿದೆ ಮತ್ತು ದೇವಾಲಯಗಳನ್ನು ಅಪವಿತ್ರಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಸನ್ಯಾಸಿ ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನವನ್ನು ಅವರು ಖಂಡಿಸಿ, ಭಿನ್ನಾಭಿಪ್ರಾಯ ಹೊಂದಿರುವವರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಉಲ್ಲೇಖಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.